ಪಾಕಿಸ್ತಾನದಲ್ಲಿ ಭೀಕರ ಬಾಂಬ್‍ಸ್ಫೋಟ, 6 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಲಾಹೋರ್, ಮೇ 8-ಪಾಕಿಸ್ತಾನದ ಲಾಹೋರ್‍ನಲ್ಲಿ ಸಂಭವಿಸಿದ ಭೀಕರ ಬಾಂಬ್‍ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟು 19ಕ್ಕೂ ಹೆಚ್ಚು ಜನ ತೀವ್ರ ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಹೋರ್‍ನ ದಾತಾದರ್ಬಾರ್ ಬಳಿ ಈ ಸ್ಫೋಟ ಸಂಭವಿಸಿತು.

ಈ ಘಟನೆಯಲ್ಲಿ 6 ಜನ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಸ್ಫೋಟದ ಹಿಂದೆ ಬಲೂಚಿಸ್ಥಾನದ ಉಗ್ರರ ಕೈವಾಡವಿರುವ ಶಂಕೆ ಇದೆ.

ಭಯೋತ್ಪಾದನೆ ಮತ್ತು ಉಗ್ರಗಾಮಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನಕ್ಕೆ ತಾನು ಫೋಷಿಸಿದ ಭಯೋತ್ಪಾದಕರಿಂದಲೇ ಆಗಾಗ ಆತಂಕಗಳು ಎದುರಾಗುತ್ತಿರುವುದು ವಾಸ್ತವ ಸ್ಥಿತಿ ವ್ಯಂಗ್ಯವಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ