ಗಡಿಯಿಂದ ಕಾಲ್ಕಿತ್ತ ಪಾಕ್ ಎಫ್-16 ಫೈಟರ್ ಜೆಟ್‌ಗಳು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 20- ಪುಲ್ವಾಮಾ ಉಗ್ರಗಾಮಿಗಳ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯು ಪಡೆ ಬಾಲಾಕೋಟ್‍ನ ಭಯೋತ್ಪಾದಕರ ಶಿಬಿರಗಳ ಮೇಲೆ ದಾಳಿ ನಡೆಸಿ 75 ದಿನಗಳಾದರೂ ಭಾರತದ ಭಯ ಪಾಕಿಸ್ತಾನವನ್ನು ಕಾಡುತ್ತಲೇ ಇದೆ.

ಇದಕ್ಕೆ ಸಾಕ್ಷಿ ಎಂಬಂತೆ ಇಂಡೋ ಪಾಕ್ ಗಡಿಯಲ್ಲಿ ಜಮಾವಣೆ ಗೊಂಡಿದ್ದ ಪಾಕಿಸ್ತಾನದ ಎಫ್-16 ಯುದ್ಧ ವಿಮಾನಗಳು ಈಗ ಅಲ್ಲಿಂದ ಜಾಗ ಖಾಲಿ ಮಾಡಿವೆ.
ಭಾರತ ಯಾವುದೇ ಸಮಯದಲ್ಲಿ ಮತ್ತೆ ದಾಳಿ ನಡೆಸಬಹುದು ಎಂಬ ಭೀತಿಯೇ ಇದಕ್ಕೆ ಕಾರಣ ಎಂದು ರಕ್ಷಣಾ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಸರಗೋಡ್, ಪಂಜಾಬ್ ಮತ್ತು ಸಿಂಧ್ ಪ್ರದೇಶದ ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಾಕಿಸ್ತಾನ ತನ್ನ ಎಫ್-16 ವಿಮಾನಗಳನ್ನು ಭದ್ರತೆಗಾಗಿ ನಿಯೋಜಿಸಿತ್ತು.
ಆದರೆ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಮುಂದುವರೆದಿದ್ದು , ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಯೋಧರು ದಿಟ್ಟ ಪ್ರತ್ಯುತ್ತರ ನೀಡುತ್ತಿದ್ದಾರೆ.

ಭಾರತ ಯಾವುದೇ ಸಂದರ್ಭದಲ್ಲಿ ದಾಳಿ ನಡೆಸಿದರೆ ಎಫ್-16 ಫೈಟರ್ ಜೆಟ್‍ಗಳಿಗೆ ಹಾನಿಯಾಗಬಹುದು ಎಂಬ ಭೀತಿಯಿಂದ ಪಾಕ್ ಅವುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ