ಜೆಡಿಎಸ್ ತೊರೆದು ಬಿಜೆಪಿ ಸೇರಿದ ಪಂಚಲಿಂಗಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.15- ಜೆಡಿಎಸ್‍ನಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಬಮೂಲ್‍ನ ಮಾಜಿ ನಿರ್ದೇಶಕ ಪಂಚಲಿಂಗಯ್ಯ ಅಪಾರ ಬೆಂಬಲಿಗರೊಂದಿಗೆ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.

ಕಂದಾಯ ಸಚಿವ ಆರ್.ಅಶೋಕ್, ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಪಂಚಲಿಂಗಯ್ಯ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಈ ವೇಳೆ ಆರ್.ಅಶೋಕ್ ಮಾತನಾಡಿ, ಪಂಚಲಿಂಗಯ್ಯ ಅವರು ಬಡವರಿಗೆ ಸ್ಪಂದಿಸುವ ಮೂಲಕ ಪಕ್ಷ ಸಂಘಟನೆ ಮಾಡಿದ್ದಾರೆ.

ಅವರ ಸಂಘಟನಾ ನಾಯಕತ್ವವನ್ನು ಜೆಡಿಎಸ್ ಪಕ್ಷ ಗುರುತಿಸಲಿಲ್ಲ. ಅವರು ಈಗ ಬಿಜೆಪಿಗೆ ಸೇರ್ಪಡೆ ಗೊಂಡಿರುವುದರಿಂದ ನಮ್ಮ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದರು. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ವಿದ್ದು ಅಭಿವೃದ್ಧಿಗಾಗಿ 247 ಮಾದರಿಯಲ್ಲಿ ದುಡಿಯುತ್ತಿರುವ ಎಸ್.ಟಿ.ಸೋಮಶೇಖರ್ ಅವರನ್ನು ಈ ಬಾರಿ ಯಶವಂತಪುರ ಕ್ಷೇತ್ರದ ಜನತೆ ಜಯಶೀಲರನ್ನಾಗಿ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಸ್.ಟಿ. ಸೋಮಶೇಖರ್ ಕ್ರಿಯಾಶೀಲ, ಸರಳ ವ್ಯಕ್ತಿ, ಜನಸಾಮಾನ್ಯರ ಕಷ್ಟ ಸುಖಗಳಿಗೆ ನಿರಂತರವಾಗಿ ಸ್ಪಂದಿಸುತ್ತಾರೆ ಎಂದು ಹೇಳಿದರು.

Facebook Comments