ಮೂರನೆ ದಿನಕ್ಕೆ ಕಾಲಿಟ್ಟ ಪಂಚಮಸಾಲಿ ಮೀಸಲಾತಿ ಹೋರಾಟ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.23- ಪಂಚಮಸಾಲಿ 2ಎ ಮೀಸಲಾತಿಗಾಗಿ ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮೂರನೆ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಬೇಡಿಕೆಗೆ ಸ್ಪಂದಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಫೆ.25ರಂದು ಪ್ರಮುಖ ಸಭೆ ನಡೆಯಲಿದ್ದು , ಮುಂದಿನ ರೂಪುರೇಷೆ ನಿರ್ಧರಿಸಲಾಗುವುದು. ಹೋರಾಟದಲ್ಲಿ ಯಾವುದೇ ಬದಲಾವಣೆ ಇಲ್ಲ. ನ್ಯಾಯಯುತವಾಗಿ ನಾವು ಸಮುದಾಯವನ್ನು 2ಎಗೆ ಸೇರಿಸಬೇಕು ಎಂದು ಒತ್ತಾಯಿಸಿದ್ದೇವೆ. ಇದಕ್ಕೆ ಎಲ್ಲರೂ ಒಪ್ಪಿದ್ದಾರೆ. ಸಮುದಾಯದವರೆಲ್ಲರೂ ಒಗ್ಗಟ್ಟಿನಿಂದಿದ್ದು, ಯಾವುದೇ ಒಡಕಿಲ್ಲ ಎಂದು ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

ಗುರುವಾರ ನಡೆಯಲಿರುವ ಸಭೆಯಲ್ಲಿ ಹೋರಾಟ ತೀವ್ರಗೊಳಿಸುವುದು ಹಾಗೂ ಸರ್ಕಾರದ ಮೊಂಡು ಧೋರಣೆ ವಿರುದ್ಧ ಆಮರಣಾಂತ ಉಪವಾಸ ನಡೆಸುವ ಕುರಿತಂತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

Facebook Comments