ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಕೇಂದ್ರದಿಂದ 7255 ಕೋಟಿ ರೂ. ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.26- ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿಯಲ್ಲಿ ದೇಶದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಕೇಂದ್ರದಿಂದ 7255.5 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ತೋರ್ಮ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣದ ಮೂಲಕ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಣಕಾಸು ನೆರವನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

7255.50 ಕೋಟಿ ರೂ. ಅಂದಾಜು ವೆಚ್ಚದೊಂದಿಗೆ 2018-19 ರಿಂದ 2021-22 ರವರೆಗೂ ನಾಲ್ಕು ವರ್ಷಗಳ ಅವಧಿಗಾಗಿ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ.

ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕಾಗಿ ಕಾರ್ಯಕ್ರಮ ಆಧಾರಿತ ಬೆಂಬಲವನ್ನು ಒದಗಿಸುತ್ತಿರುವ ಸಚಿವಾಲಯ, ಚುನಾಯಿತ ಪ್ರತಿನಿಧಿಗಳ ಸಾಮಥ್ರ್ಯ ವೃದ್ಧಿ ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಗ್ರಾಮ ಸ್ವರಾಜ್ ಯೋಜನೆಯಡಿ ಸಾಮಥ್ರ್ಯ ವೃದ್ಧಿ ಮತ್ತು ತರಬೇತಿ, ಮಾನವ ಸಂಪನ್ಮೂಲ ಮತ್ತು ತರಬೇತಿ, ಗ್ರಾಮಸಭೆ ಸಬಲೀಕರಣ, ದೂರ ಸಂಪರ್ಕ, ತಾಂತ್ರಿಕ ಬೆಂಬಲ, ಆರ್ಥಿಕ ಅಭಿವೃದ್ಧಿ ಹಾಗೂ ಆದ್ವಾಯ ದ್ವಿಗುಣ ಮತ್ತಿತರ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ