ಚುನಾವಣೆ ಸಭೆಗಳಿಂದ ಮಾಜಿ ಡಿಸಿಎಂ ಪರಮೇಶ್ವರ್ ದೂರ ಉಳಿದಿದ್ದಕೆಯೇಕೆ ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.19-ಚುನಾವಣೆ ಸಭೆಗಳಿಗೆ ಉದ್ದೇಶಪೂರ್ವಕವಾಗಿ ತಾವೇನು ದೂರು ಉಳಿಯಲಿಲ್ಲ. ಆರೋಗ್ಯ ಸಮಸ್ಯೆಯಿಂದಾಗಿ ಭಾಗವಹಿಸಲು ಆಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದ ಕೆಪಿಸಿಸಿ ಕಚೇರಿಯಲ್ಲಿಂದು ಆಯೋಜಿಸಿದ್ದ ಇಂದಿರಾಗಾಂಧಿಯವರ 102ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,

ಇತ್ತೀಚಿನ ದಿನಗಳಲ್ಲಿ ಚುನಾವಣಾ ಸಭೆಗಳಿಗೆ ಉದ್ದೇಶಪೂರ್ವಕವಾಗಿ ಗೈರಾಗುತ್ತಿರಲಿಲ್ಲ. ಆದರೆ ಆರೋಗ್ಯ ಸಮಸ್ಯೆಯಿಂದ ದೂರು ಉಳಿಯಬೇಕಾಯಿತು. ಮುಂದೆ ಪಕ್ಷ ಸಂಘಟನೆ ವಿಚಾರದಲ್ಲಿ ನಾನು ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ ಎಂದು ಹೇಳಿದರು.

ಈ ಬಾರಿ ಉಪಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದಲ್ಲಿ ಸಣ್ಣಪುಟ್ಟ ವ್ಯತ್ಯಾಸವಾಗಿದೆ. ಎಲ್ಲವೂ ಸರಿ ಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬೈ ಎಲೆಕ್ಷನ್‍ನಲ್ಲಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲಬೇಕು.ಯಾರ ಜೊತೆಯೂ ಹೊಂದಾಣಿಕೆ ಇಲ್ಲ ಎಂದು ತಿಳಿಸಿದರು.

ಇತ್ತೀಚಿನ ಸರ್ಕಾರಗಳು ನಾವೇ ಅಕ್ಕಿ ಕೊಡುತ್ತೇವೆ ಎಂದು ಒಬ್ಬರಿಗಿಂತ ಒಬ್ಬರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗಲೇ ಗರೀಬಿ ಹಠಾವೋ ಎಂಬ ಯೋಜನೆ ಜಾರಿ ಮಾಡಿ ಬಡವರಿಗೆ ಮೊದಲು ಅಕ್ಕಿ ಕೊಟ್ಟಿದ್ದೆ ಇಂದಿರಾಗಾಂಧಿ ಎಂದು ಸ್ಮರಿಸಿದರು. ರಾಜ್ಯದಲ್ಲಿ ಈ ಬಾರಿ ನೆರೆಯಿದ್ದರೂ ಸಹ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Facebook Comments