ಕುತೂಹಲ ಕೆರಳಿಸಿದೆ ಕಾಂಗ್ರೆಸ್ ಶಾಸಕಾಂಗ ಸಭೆಗೆ ಡಿಕೆಶಿ ಮತ್ತು ಪರಮೇಶ್ವರ್ ಗೈರು ಹಾಜರಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.18-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾಗುವ ಮೂಲಕ ಕುತೂಹಲ ಕೆರಳಿಸಿದ್ದಾರೆ.ವಿಧಾನಸಭೆ ಅಧಿವೇಶನದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಮೇಲಿಂದ ಮೇಲೆ ನಡೆದ ಶಾಸಕಾಂಗ ಸಭೆಗಳಿಗೆ ಇವರು ಗೈರಾಗುತ್ತಲೇ ಇದ್ದಾರೆ.

ಇಂದು ನಡೆದ ಮಹತ್ವದ ಸಭೆಗೂ ಇಬ್ಬರೂ ನಾಯಕರು ಗೈರು ಹಾಜರಾಗಿದ್ದು ವಿಶೇಷವಾಗಿತ್ತು. ಇತ್ತೀಚೆಗೆ ನಡೆದ ಮಂಗಳೂರು ಗೋಲಿಬಾರ್, ಬೀದರ್ ಶಾಲೆಯ ದೇಶ ದ್ರೋಹ ಪ್ರಕರಣ, ಮಾಜಿ ಸಚಿವ ಯು.ಟಿ.ಖಾದರ್ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್ ಪ್ರಕರಣ ಸೇರಿದಂತೆ ಹಲವಾರು ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಲ್ಲಿ ಚರ್ಚೆ ಮಾಡಲು ಸ್ಪೀಕರ್ ಅವರ ಅನುಮತಿ ಕೇಳಿ ನೋಟಿಸ್ ನೀಡಲಾಗಿದೆ.

ಈ ಕುರಿತಂತೆ ವಿಧಾನಸಭೆಯಲ್ಲಿ ಕಾವೇರಿದ ಚರ್ಚೆಯಾಗುವ ನಿರೀಕ್ಷೆಗಳಿವೆ. ಈ ಕುರಿತು ಚರ್ಚೆ ನಡೆಸಲು ಇಂದು ಬೆಳಗ್ಗೆ ಶಾಸಕಾಂಗ ಸಭೆ ಕರೆಯಲಾಗಿತ್ತು. ಆದರೆ ಬೆರಳಣೆಕೆಯಷ್ಟು ಮಂದಿ ಮಾತ್ರ ಸಭೆಗೆ ಹಾಜರಾಗಿದ್ದರು.  ಮಾಜಿ ಸಚಿವ ಎಚ್.ಕೆ.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ವಿಧಾನಸಭೆ ಪರಿಷತ್ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಭಾಗವಹಿಸಿದ್ದರು.

ವಿಧಾನಮಂಡಲದಲ್ಲಿ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಒಂದೊಂದೇ ಅಸ್ತ್ರ ಪ್ರಯೋಗ ಮಾಡಬೇಕು. ಯಾವ ಸಂದರ್ಭದಲ್ಲೂ ವಿರೋಧ ಪಕ್ಷಗಳು ಸೋಲು ಒಪ್ಪಿಕೊಂಡು ಹಿಂದೆ ಸರಿಯಬಾರದು. ಸಾಮಾನ್ಯವಾಗಿ ಬಿಜೆಪಿ ಆಕ್ರಮಣಕಾರಿ ಮನೋಭಾವ ಪ್ರದರ್ಶಿಸುತ್ತದೆ. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡ ಪೂರ್ವ ತಯಾರಿ ಮಾಡಿಕೊಂಡಿರಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ.  ಇಂದಿನ ಶಾಸಕಾಂಗ ಸಭೆಗೆ ಬೆರಳೆಣಿಕೆ ಶಾಸಕರು ಹಾಜರಾಗಿರುವುದು ವಿಶೇಷ.

Facebook Comments

Sri Raghav

Admin