ಮಧುಗಿರಿ ತಾಲ್ಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಪರಮೇಶ್ವರ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಅ.1- ಭೌಗೋಳಿಕವಾಗಿ ಎಲ್ಲ ಹಂತದಲ್ಲಿಯೂ ವಿಸ್ತರಣೆ ಯಲ್ಲಿರುವ ಮಧುಗಿರಿ ತಾಲ್ಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.

ಪತ್ರಿಕೆಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು, ಮಧುಗಿರಿ ಯಲ್ಲಿ ಈಗಾಗಲೇ ಜಿಲ್ಲಾ ಕೇಂದ್ರದ ಸೌಲಭ್ಯಗಳನ್ನು ಪಡೆಯುವ ಎಲ್ಲ ಹಂತವನ್ನೂ ಕಲ್ಪಿಸಿಕೊಳ್ಳಲಾಗಿದೆ .ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ ತಾಲ್ಲೂಕುಗಳನ್ನು ಒಗ್ಗೂಡಿಸಿ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕು.

ಆಗ ಶೈಕ್ಷಣಿಕವಾಗಿ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಿದರೆ ಇಲ್ಲಿ ಅಭಿವೃದ್ಧಿ ಹೊಂದಲು ಪೂರಕವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈಗ ರಾಜ್ಯದಲ್ಲಿ ಹೊಸ ಜಿಲ್ಲೆ ಆರಂಭವಾಗುವುದರ ಬಗ್ಗೆ ಪರ ವಿರೋಧ ಎರಡೂ ಹಂತದಲ್ಲಿಯೂ ಚರ್ಚೆಗಳು ನಿರಂತರವಾಗಿ ನಡೆಯುತ್ತಿವೆ .ಆದರೆ ಇಂತಹ ಸಂದರ್ಭದಲ್ಲಿ ಸುಮಾರು ಆರೇಳು ವರ್ಷಗಳಿಂದ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಸ್ಥಾಪನೆ ಮಾಡಬೇಕೆಂದು ಪ್ರಸ್ತಾವನೆ ಇತ್ತು . ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವ ಮುನ್ನ ಇಲ್ಲಿಗೆ ಬೇಕಾಗಿರುವ ಎಲ್ಲ ಸೌಲಭ್ಯಗಳನ್ನು ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಸಾರ್ವಜನಿಕರ ಒತ್ತಡದ ಹಿನ್ನೆಲೆಯಲ್ಲಿ ನಾನು ಸಿಎಂಗೆ ಪತ್ರ ಬರೆದು ಒತ್ತಾಯಿದ್ದು, ಈಗಾಗಲೇ ಮಧುಗಿರಿಗೆ ಹಲವು ಸೌಲಭ್ಯಗಳನ್ನು ನಮ್ಮ ಸರ್ಕಾರದ ಅವಧಿಯಲ್ಲಿ ನೀಡಲಾಗಿದೆ. ಹಾಗಾಗಿ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವುದರಿಂದ ಅಭಿವೃದ್ಧಿಗೆ ಪೂರಕವಾಗಲಿದ್ದು, ಸಮಸ್ಯೆಗಳು ಬಗೆಹರಿಯಲಿವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

Facebook Comments