ವಿದ್ಯಾರ್ಥಿಗಳ ಪೋಷಕರ ಲಸಿಕೆ ಖಾತ್ರಿ ಬಗ್ಗೆ ಸದ್ಯದಲ್ಲೇ ತೀರ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.4- ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರು ಎರಡು ಡೋಸ್ ಲಸಿಕೆ ಪಡೆದಿರುವ ಬಗ್ಗೆ ಯಾವ ರೀತಿ ಖಾತ್ರಿ ಪಡಿಸಿಕೊಳ್ಳಬೇಕು ಎಂಬ ಬಗ್ಗೆ ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್.ಆರ್ ತಿಳಿಸಿದರು.
ರಾಜ್ಯ ಸರ್ಕಾರ ನಿನ್ನೆಷ್ಟೇ 18 ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಈ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕೆಂದು ಮಾರ್ಗಸೂಚಿ ಹೊರಡಿಸಿದೆ.

ವಿದ್ಯಾರ್ಥಿಗಳ ಪೋಷಕರು ಈ ಎರಡು ಡೋಸ್ ಲಸಿಕೆ ಪಡೆಯಬೇಕೆಂಬುದು ಸ್ವಾಗತಾರ್ಹ. ಪೋಷಕರು ಲಸಿಕೆ ಪಡೆದಿರುವುದನ್ನು ಯಾವ ರೀತಿ ದೃಢಪಡಿಸಿಕೊಳ್ಳಬೇಕೆಂಬ ಬಗ್ಗೆ ಸಮಾ ಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗು ವುದು ಎಂದು ಅವರು ಈ ಸಂಜೆಗೆ ತಿಳಿಸಿದರು.

ರಾಜ್ಯಕ್ಕೆ ಓಮಿಕ್ರಾನ್ ಸೋಂಕು ಕಾಲಿಟ್ಟಿರುವ ಬೆನ್ನಲ್ಲೇ 18 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪೋಷಕರು ಕಡ್ಡಾಯವಾಗಿ ಕೋವಿಡ್‍ನ ಎರಡು ಡೋಸ್ ಲಸಿಕೆ ಪಡೆಯಬೇಕಾಗಿದೆ. ರಾಜ್ಯ ಸರ್ಕಾರ ಕಾಲ ಕಾಲಕ್ಕೆ ಪ್ರಕಟಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಶಾಲಾ ಕಾಲೇಜುಗಳಲ್ಲಿ ಪಾಲಿಸಲಾಗುತ್ತಿದೆ. ಹೊಸದಾಗಿ ಮಕ್ಕಳ ಪೋಷಕರು ಎರಡು ಡೋಸ್ ಲಸಿಕೆ ಪಡೆಯಬೇಕೆಂಬುದನ್ನು ನಿನ್ನೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪೋಷಕರಿಗೆ ಶಾಲಾ ಕಾಲೇಜುಗಳ ಮೂಲಕ ಲಸಿಕೆ ಪಡೆಯಲು ತಿಳುವಳಿಕೆ ನೀಡಲಾಗುವುದು ಎಂದು ಹೇಳಿದರು. ಈ ಸೋಂಕು ನಿಯಂತ್ರಣಕ್ಕೆ ಸರ್ಕಾರದ ಜತೆ ಸಮುದಾಯ ಮತ್ತು ಪೋಷಕರು ಕೂಡ ಸಹಕಾರ ನೀಡಬೇಕು ಎಂದರು.

Facebook Comments