ಕಬಿನಿ ಬಳಿ ಕೆಆರ್‌ಎಸ್ ಬೃಂದಾವನ ಮಾದರಿಯಲ್ಲಿ ಉದ್ಯಾನವನ ನಿರ್ಮಾಣ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಫೆ.23- ಕೆಆರ್ ಎಸ್‍ನಲ್ಲಿರುವ ಬೃಂದಾವನ ಉದ್ಯಾನವನದಂತೆ ಕಬಿನಿ ಬಳಿ 48 ಕೋಟಿ ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲು ಬಜೆಟ್‍ನಲ್ಲಿ ಘೋಷಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಎಚ್.ಡಿ.ಕೋಟೆ ತಾಲ್ಲೂಕಿನ ಮೈಸೂರು ಗಡಿಭಾಗದ ಸಮೀಪ ಇಂದು ಕಂಚಮಳ್ಳಿಯ ಹತ್ತಿರ ಸ್ವಾಗತ ಕಮಾನನ್ನು ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ಜನರು ಎಚ್.ಡಿ.ಕೋಟೆ ಹೆಸರು ಕೇಳಿರುತ್ತಾರೆ. ಆದರೆ ಇಲ್ಲಿನ ಪ್ರವಾಸೋದ್ಯಮ ವೈಶಿಷ್ಟ್ಯತೆಗಳು ತಿಳಿದಿರುವುದಿಲ್ಲ. ಈ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿರುವ ಪ್ರಕೃತಿ ಸಂಪತ್ತನ್ನು ಪರಿಚಯಿಸಲು ಸ್ವಾಗತ ಕಮಾನು ನೆರವಾಗಲಿದೆ ಎಂದರು.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದ್ದು, ಒಂದು ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರಕಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕೈಗೊಳ್ಳಲಾಗುವುದು.

ಈ ಮೂಲಕ ಜಿಲ್ಲಾಯನ್ನು ಅಭಿವೃದ್ಧಿಗೊಳಿಸಿ ಸಮಗ್ರ ಪ್ರವಾಸೋದ್ಯಮಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಲು ನಾನು ಬದ್ಧನಿದ್ದೇನೆ ಎಂದರು. ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಇತರ ಅಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin