ಸಂಸತ್‌ನಲ್ಲಿ ಕನ್ನಡ ಡಿಂಡಿಮ, ಕನ್ನಡಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಸಂಸದರು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.17-ಲೋಕಸಭೆಯಲ್ಲಿಂದು ಕರ್ನಾಟಕದಿಂದ ಆಯ್ಕೆಯಾದಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕನ್ನಡಾಭಿಮಾನ ಮೆರೆದಿದ್ದಾರೆ.

ಮೊದಲಿಗೆ ಉತ್ತರ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಆಯ್ಕೆಯಾಗಿ ಪ್ರಸ್ತುತ ಕೇಂದ್ರ ರಸಗೊಬ್ಬರ ಸಚಿವರಾಗಿರುವ ಡಿ.ವಿ.ಸದಾನಂದಗೌಡ, ನಂತರದ ಧಾರವಾಡದಿಂದ ಆಯ್ಕೆಯಾಗಿ ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವರಾಗಿರುವ ಪ್ರಹ್ಲಾದ್ ಜೋಷಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ನಂತರ ಇವರ ಪ್ರೇರಣೆ ಪಡೆದು ಇತರ ರಾಜ್ಯದ ಸಂಸದರೂ ಕೂಡ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದು ಲೋಕಸಭೆ ಇತಿಹಾಸದಲ್ಲೇ ಇದೇ ಮೊದಲ ಬಾರಿಯಾಗಿದೆ.

ಮಿಂಚಿದ ಕರ್ನಾಟಕ ಯುವ ಸಂಸದರು : ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಯುವ ಸಂಸದರ ಪೈಕಿ ಒಬ್ಬರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಇಂದು ಕರ್ನಾಟಕದ ಮೈಸೂರಿನ ಗತ ವೈಭವವನ್ನು ಮೆರೆದಿದ್ದಾರೆ. ಮೈಸೂರು ಶೈಲಿಯ ಪಂಚೆ, ಶಲ್ಯ ಧರಿಸಿ ತೇಜಸ್ವಿ ಸೂರ್ಯ ಅವರು ಬಂದಿದ್ದು ವಿಶೇಷವಾಗಿತ್ತು.

ಕೊಡಗು -ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಎರಡನೇ ಬಾರಿ ಸಂಸದರಾದ ಸಂತಸದಲ್ಲಿ ಈ ಬಾರಿ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ