‘ಪಶು ಸಂಜೀವಿನಿ’ ವಾಹನ ಸೇವೆಗೆ ಸಿಎಂ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.20- ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ರೈತರ ಮನೆ ಬಾಗಿಲಿಗೆ ಪಶು ಸಂಜೀವಿನಿ ಯೋಜನೆ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಗೋವಿನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂಗಾರು ಅವೇಶನದಲ್ಲಿ ಕಾಯ್ದೆ ಜಾರಿಗೆ ತರುವ ಯೋಚನೆಯಿದೆ ಎಂದು ತಿಳಿಸಿದರು.

ಇದೇ ವೇಳೆ, ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ರೈತರ ಮನೆ ಬಾಗಿಲಿಗೆ ಪಶು ಸಂಜೀವಿನಿ ಯೋಜನೆ ಜಾರಿಗೆ ತರಲಾಗುತ್ತಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ ಸ್ಪಂದಿಸಿ ಕಾರ್ಯನಿರ್ವಹಿಸಲಿದೆ ಸೇವೆಯನ್ನು ಇಲಾಖೆಯ ಸಹಾಯವಾಣಿ ಸೇವೆಗಳಿಗೆ ಜಾನುವಾರುಗಳ ರಕ್ಷಣೆಗೆ ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಶು ಸಂಜೀವಿನಿ ವಾಹನದಲ್ಲಿ ಶಸ್ತ್ರಚಿಕಿತ್ಸೆ ಘಟಕ ಸೇರಿ ವಿವಿಧ ಆರೋಗ್ಯ ಸೇವೆ ಲಭ್ಯವಿರುತ್ತವೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಣೆ ಮಾಡಲಾಗುವುದು.

ಎರಡು ಕೋಟಿ ರೂ. ಅನುದಾನದಲ್ಲಿ ಪಶು ಚಿಕಿತ್ಸಾ ವಾಹನ ಸೇವೆಯನ್ನು ಜಾರಿಗೆ ತರಲಾಗುತ್ತಿದೆ. 15 ಜಿಲ್ಲೆಗಳಿಗೆ ವಾಹನ ಸೌಲಭ್ಯ ನೀಡಲಾಗುತ್ತದೆ ಎಂದರು.

ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ಗೆ ಬಿಟ್ಟ ವಿಚಾರವಾಗಿದೆ. ಸಂಪುಟದಿಂದ ನನ್ನ ಹೆಸರು ಕೈ ಬಿಡುವ ಸುದ್ದಿ ಸುಳ್ಳು ಎಂದು ಹೇಳಿದರು.

ಇದಕ್ಕೂ ಮುನ್ನ , ಶಸ್ತ್ರಚಿಕಿತ್ಸೆ ಘಟಕ ಸೇರಿ ವಿವಿಧ ಆರೋಗ್ಯ ಸೇವೆ ಹೊಂದಿರುವ ಪಶು ಸಂಜೀವಿನಿ ವಾಹನಕ್ಕೆ ಮುಖ್ಯಮಂತ್ರಿ ಬಿ.ಎಸï.ಯಡಿಯೂರಪ್ಪ ಗುರುವಾರ ಬೆಳಗ್ಗೆ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು.

Facebook Comments

Sri Raghav

Admin