ಪಾಟೀಲ್ ಪುಟ್ಟಪ್ಪ ಆರೋಗ್ಯವಾಗಿದ್ದಾರೆ : ಕುಟುಂಬದವರ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಫೆ.25- ನಾಡೋಜ ಪಾಟೀಲ್ ಪುಟ್ಟಪ್ಪ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಯನ್ನು ಹರಡಿಸಲಾಗುತ್ತಿದೆ. ಆದರೆ ಪಾಟೀಲ್ ಪುಟ್ಟಪ್ಪ ಅವರು ಆರೋಗ್ಯವಾಗಿದ್ದು, ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದವರು ಸ್ಪಷ್ಟಪಡಿಸಿದ್ದಾರೆ.

ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಆದರೆ ಅವರು ಚೇತರಿಸಿಕೊಂಡಿದ್ದು, ಗಂಜಿಯನ್ನು ಸೇವಿಸುತ್ತಿದ್ದಾರೆ. ಅದರ ಜೊತೆಗೆ ಆಪ್ತರು ಹಾಗೂ ಕುಟುಂಬದವರ ಜೊತೆ ಮಾತನಾಡುತ್ತಿದ್ದು, ಯಾರು ಸುಳ್ಳು ಸುದ್ದಿಯನ್ನು ಹರಡಿಸದಂತೆ ಪಾಪು ಕುಟುಂಬದವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

# ಆರೋಗ್ಯ ವಿಚಾರಿಸಿದ ಎಚ್.ಕೆ. ಪಾಟೀಲ
ಕರ್ನಾಟಕ ಏಕೀಕರಣ ರೂವಾರಿ ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಪಾಟೀಲ ಪುಟ್ಟಪ್ಪ ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ ಅವರು ಇಂದು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಪಾಟೀಲ ಪುಟ್ಟಪ್ಪ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಾಸಿಲಾಗಿದ್ದು, ಪಾಪು ಅವರು ಕೆಮ್ಮು, ಕಫ ಹಾಗೂ ಶಾಸ್ವಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಇಂದು ಮಾಜಿ ಸಚಿವ ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈದ್ಯರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು. ಎಂ.ಎಂ. ಹಿಂಡಿಸಗೇರಿ, ಅನೀಲಕುಮಾರ ಪಾಟೀಲ, ಮಹೇಂದ್ರ ಸಿಂಘಿ, ಸದಾನಂದ ಡಂಗನವರ, ಶ್ರೀನಿವಾಸ ಮಾನೆ, ವಸಂತ ಲದವಾ, ಅಶೋಕ ಪಾಟೀಲ ಇತರರಿದ್ದರು.

Facebook Comments