ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಭದೆರ್ವಾ/ಜಮ್ಮು, ಮೇ 16-ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದ ಹಿಂಸಾಚಾರ ಮತ್ತು ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬ ಹತನಾಗಿ, ಅನೇಕರು ಗಾಯಗೊಂಡ ಘಟನೆ ನಡೆದಿದೆ. ಪ್ರಕ್ಷುಬ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಭದೆರ್ವಾ ಕಣಿವೆ ಪ್ರದೇಶದಲ್ಲಿ ಪೊಲೀಸರು ಕಫ್ರ್ಯೂ ವಿಧಿಸಿದ್ದಾರೆ.

ಗಲಭೆಯಲ್ಲಿ ಅನೇಕ ವಾಹನಗಳು ಧ್ವಂಸಗೊಂಡಿವೆ. ಕೆಲವು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.  ಹಿಂಸಾಚಾರ ಮತ್ತು ಗುಂಡಿನ ದಾಳಿಯಲ್ಲಿ ಹತನಾದ ವ್ಯಕ್ತಿಯನ್ನು ನಯೀಮ್ ಎಂದು ಗುರುತಿಸಲಾಗಿದೆ.  ಗಲಭೆ, ಹಿಂಸೆ ಮತ್ತು ಗುಂಡಿನ ದಾಳಿಗೆ ಕಾರಣವಾದ ಘಟನೆ ನಿಖರ ಕಾರಣದ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಗೋ ಸಂರಕ್ಷಕರಿಂದ ನಯೀಮ್ ಹತನಾದನೆಂದು ಆತನ ಸಂಬಂಧಿಗಳು ಆರೋಪಿಸಿದ್ದಾರೆ. ಆದರೆ, ಇನ್ನೊಂದು ಮೂಲದ ಪ್ರಕಾರ, ನಿನ್ನೆ ರಾತ್ರಿ ಇಬ್ಬರು ವ್ಯಕ್ತಿಗಳು ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದರು. ಆ ಸಂದರ್ಭದಲ್ಲಿ ಅವರ ಮೇಲೆ ಗುಂಡು ಹಾರಿಸಲಾಗಿದೆ.

ಈ ಘಟನೆ ನಂತರ ನಯೀಮ್ ಕುಟುಂಬದವರು, ಬಂಧು-ಮಿತ್ರರು ಭದೆರ್ವಾ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದರು. ಐದು ವಾಹನಗಳನ್ನು ಜಖಂಗೊಳಿಸಿ, ಮೂರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದರು. ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ