ಹಬ್ಬದ ಖುಷಿಯಲ್ಲಿದ್ದ ಜನರಿಗೆ ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಶಾಕ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಅ.14- ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಳಿತ ಕಾಣುತ್ತಿರುವ ನಡುವೆಯೇ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನೇ ದಿನೇ ಹೆಚ್ಚುತ್ತಿದೆ. ಡೀಸೆಲ್ 34 ಪೈಸೆ , ಪೆಟ್ರೋಲ್ 35 ಪೈಸೆ ಹೆಚ್ಚಳವಾಗಿದ್ದು , ರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಈಗ ಪ್ರತಿ ಲೀಟರ್ ಪೆಟ್ರೋಲ್ ದರ 110ರ ಗಡಿ ದಾಟಿದೆ.

ದೇಶ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ 100ರ ಗಡಿ ದಾಟಿದ್ದು , ಸಾಮಾನ್ಯ ಜನರ ಮೇಲೆ ಹೊರೆ ಹೆಚ್ಚಾಗಿದೆ ಎಂದು ಆರ್ಥಿಕ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಬೆಲೆ 109 ರೂ.ಗಳ ಗಡಿಯಲ್ಲಿದ್ದು, ಡೀಸೆಲ್ ಶತಕ ಬಾರಿಸಿ ಮುನ್ನುಗ್ಗಿದೆ. ಜಿಎಸ್‍ಟಿ ವ್ಯಾಪ್ತಿಗೆ ತೈಲವನ್ನು ತರುವುದು ಹಾಗೂ ಸುಂಕ ಕಡಿತಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡಗಳು ಹೆಚ್ಚಾಗಿವೆ.

ದೇಶದ ಹಲವಾರು ಮೆಟ್ರೋ ನಗರಗಳಲ್ಲಿ ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯಲ್ಲೂ ಕೂಡ ಏರಿಕೆ ಕಂಡು ಬಂದಿದ್ದು, ಹಬ್ಬದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಶಾಕ್ ನೀಡಿದಂತಾಗಿದೆ.

Facebook Comments