ಕಳೆದ ರಾತ್ರಿಯಿಂದಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ, ಸೋಮವಾರ ವಿದ್ಯುತ್ ಶಾಕ್..!

ಈ ಸುದ್ದಿಯನ್ನು ಶೇರ್ ಮಾಡಿ

Petrol-and-diesel
ಬೆಂಗಳೂರು,ಜು.14-ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕಳೆದ ರಾತ್ರಿಯಿಂದಲೇ ಜಾರಿಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಇನ್ನು ಸೋಮವಾರದಿಂದ ವಿದ್ಯುತ್ ದರ ಪ್ರತಿ ಯೂನಿಟ್‍ಗೆ 10ರಿಂದ 20 ಪೈಸೆ ಹೆಚ್ಚಳವಾಗಲಿದ್ದು, ಆ.1ರಿಂದ ಮದ್ಯದ ದರವೂ ಶೇ.4ರಷ್ಟು ಏರಿಕೆಯಾಗಲಿದೆ.
ಬಜೆಟ್‍ನಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡುವುದಾಗಿ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು.

ಅದರಂತೆ ಕಳೆದ ರಾತ್ರಿಯಿಂದಲೇ ಪ್ರತಿ ಲೀಟರ್ ಡೀಸೆಲ್ ದರವನ್ನು 1.12 ಹಾಗೂ ಪೆಟ್ರೋಲ್ ದರವನ್ನು ಲೀಟರ್ 1.14 ರೂ.ಗೆ ವಿಧಿಸಲಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಪೆಟ್ರೋಲ್ ದರ ಲೀಟರ್‍ಗೆ 79.32 ರೂ ಹಾಗೂ ಡೀಸೆಲ್ ದರ 70.75 ರೂ.ನಷ್ಟಿದೆ. ಈ ಬೆಳವಣಿಗೆಗಳ ನಡುವೆಯೇ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಸರ್ಕಾರ ಸೆಸ್ ಹಾಕಲು ಮುಂದಾಗಿರುವುದರಿಂದ ಮುಂದಿನ ದಿನಗಳಲ್ಲಿ ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.

Facebook Comments

Sri Raghav

Admin