ಸದ್ಯದಲ್ಲೇ ವಾಹನ ಸವಾರರಿಗೆ ಕಾದಿದೆ ಬಹುದೊಡ್ಡ ಶಾಕ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಸೆ.17- ಸೌದಿ ಅರೇಬಿಯಾದಲ್ಲಿನ ವಿಶ್ವದ ಅತಿ ದೊಡ್ಡ ಕಚ್ಚಾ ತೈಲ ಸಂಸ್ಕರಣಾ ಘಟಕದ ಮೇಲೆ ಉಗ್ರರು ಡ್ರೋನ್ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ತೈಲೋತ್ಪಾದನೆ ತೀವ್ರ ಕುಂಠಿತಗೊಂಡಿದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆ ಕಾಣುವ ಸಾಧ್ಯತೆಗಳಿದ್ದು , ಭಾರತದಲ್ಲೂ ಅದರ ಪರಿಣಾಮ ಉಂಟಾಗಲಿದೆ.

ದೇಶದಲ್ಲಿ ಮುಂದಿನ 15 ದಿನಗಳಲ್ಲಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ರೂ.5 ರಿಂದ 6ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಸೋಮವಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಬ್ಯಾರಲ್‍ಗೆ 72 ಡಾಲರ್‍ಗೆ ತಲುಪಿದೆ. ಇದು ಹಿಂದಿನ ದರಕ್ಕಿಂತ ಶೇ.20ರಷ್ಟು ದುಬಾರಿಯಾಗಿದೆ.

ಆದರೆ, ಸೌದಿ ಅರೇಬಿಯಾದಲ್ಲಿ ಉತ್ಪಾದನೆ ಕಂಠಿತಗೊಂಡಿದ್ದರೂ ಅದರಿಂದ ಭಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟಪಡಿಸಿದೆಯಾದರೂ ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಭಾರತ ವಿಶ್ವದ ಮೂರನೇ ಅತಿ ದೊಡ್ಡ ತೈಲ ಆಮದು ದೇಶ.

ನಮಗೆ ಅತಿ ಹೆಚ್ಚು ತೈಲ ಸರಬರಾಜು ಮಾಡುವ ರಾಷ್ಟ್ರಗಳ ಪಟ್ಟಿಯಲ್ಲಿ ಸೌದಿ ಅರೇಬಿಯಾ ನಂ.2 ಸ್ಥಾನದಲ್ಲಿದೆ. ಸೌದಿ ಸರ್ಕಾರದ ಅರಾಮ್ಕೋ ಅಧಿಕಾರಿಗಳೇ ಭಾರತಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಅದಾಗ್ಯೂ ಪರಿಸ್ಥಿತಿ ಮೇಲೆ ನಿಗಾ ಇಡಲಾಗಿದೆ.

Facebook Comments

Sri Raghav

Admin