ಫೋನ್ ಕದ್ದಾಲಿಕೆ ಪ್ರಕರಣದಲ್ಲಿ 54 ಇನ್ಸ್‌ಪೆಕ್ಟರ್‌ಗಳಿಗೆ ಸಿಬಿಐ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.4- ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಟೆಲಿಗ್ರಾಫ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಒಟ್ಟು 54 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜರಿ ಮಾಡಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇರೆಗೆ ಈ ಹಿಂದೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್, ಆಡುಗೋಡಿ ಟೆಕ್ನಿಕಲ್ ಸೆಲ್‌ನ ಎಸಿಪಿ ಇನ್ಸ್‌ಪೆಕ್ಟರ್‌ಗಳನ್ನ ಸಿಬಿಐ ವಿಚಾರಣೆಗೊಳಪಡಿಸಿತ್ತು.

ಇದೀಗ ಬೇರೆ ಬೇರೆ ಠಾಣೆಯ ಒಟ್ಟು 54 ಇನ್ಸ್‌ಪೆಕ್ಟರ್‌ಗಳಿಗೆ ನೋಟಿಸ್ ಜರಿ ಮಾಡಿ ನವೆಂಬರ್ 4, 5 ಮತ್ತು 6 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. ಈ ಎಲ್ಲಾ ಪೊಲೀಸರು ತನಿಖೆಯ ಉದ್ದೇಶದಿಂದ ಹಲವು ಪ್ರಕರಣಗಳಲ್ಲಿ ತಮ್ಮ ವ್ಯಾಪ್ತಿಗೊಳಪಟ್ಟ ಆರೋಪಿಗಳ ಫೋನ್ ಟ್ಯಾಪಿಂಗ್ ಮಾಡಿದ್ದರು.

ಈ ಹಿನ್ನೆಲೆ ಇವರಿಗೆ ನೋಟಿಸ್ ನೀಡಿರುವ ಸಿಬಿಐ, ಫೋನ್ ಟ್ಯಾಪಿಂಗ್ ಯಾವ ಉದ್ದೇಶಕ್ಕಾಗಿ ಮಾಡಲಾಗಿದೆ? ನಿಮಗೆ ಸಿಕ್ಕ ಮಾಹಿತಿ ಕುರಿತು ಮಾಹಿತಿ ನೀಡುವಂತೆ ಇನ್ಸ್‌ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Facebook Comments