ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ಸಾರ್ವಜನಿಕರ ಸಲಹೆ ಕೇಳಿದ ಪ್ರಧಾನಿ

ಈ ಸುದ್ದಿಯನ್ನು ಶೇರ್ ಮಾಡಿ

Modi--001

ನವದೆಹಲಿ, ಜು.31-ಆಗಸ್ಟ್ 15ರಂದು ನಡೆಯಲಿರುವ 72ನೇ ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣಕ್ಕಾಗಿ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.  ಈ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ, ಐತಿಹಾಸಿಕ ಕೆಂಪುಕೋಟೆಯಲ್ಲಿ ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನಾಚರಣೆ ಭಾಷಣಕ್ಕಾಗಿ ನಿಮ್ಮ ಅಭಿಪ್ರಾಯಗಳು, ಆಲೋಚನೆಗಳು ಮತ್ತು ವಿಚಾರಗಳನ್ನು ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದಕ್ಕಾಗಿ ಸಾರ್ವಜನಿಕರ ಸಲಹೆ ಮತ್ತು ಚರ್ಚೆಗೆ ಪ್ರಧಾನಿಯವರ ನಮೋ ಆ್ಯಪ್‍ನಲ್ಲಿ ವೇದಿಕೆ ಕಲ್ಪಿಸಲಾಗಿದೆ. ಅಲ್ಲಿ ಸಾರ್ವಜನಿಕರು ತಮ್ಮ ಅಭಿಪ್ರಾಯಗಳು ಮತ್ತು ಆಲೋಚನೆಗಳನ್ನು ವಿನಿಮಯ ಮಾಡಿಕೊಳ್ಳಬಹುದು ಎಂದು ಮೋದಿ ಹೇಳಿದ್ದಾರೆ.  ಕಳೆದ ವರ್ಷದ ಸ್ವಾತಂತ್ರೋತ್ಸವ ಭಾಷಣದಲ್ಲಿ ಮೋದಿ 56 ನಿಮಿಷಗಳ ಭಾಷಣ ಮಾಡಿದ್ದರು. 2016ರಲ್ಲಿ ದೀರ್ಘಕಾಲ ಅಂದರೆ 96 ನಿಮಿಷಗಳ ಕಾಲ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin