ನವೆಂಬರ್ ವರೆಗೂ ಉಚಿತ ರೇಷನ್, ಇಲ್ಲಿದೆ ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ ಜೂ-30 : ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದ​ವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಘೋಷಿಸಿದ್ದಾರೆ.

ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕೊರೋನಾ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿರುವುದರಿಂದ ಗರೀಬ್ ಕಲ್ಯಾಣ್ ಯೋಜನೆಯನ್ನು ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲೂ ಮುಂದುವರಿಸಲಾಗುವುದು ಎಂದಿದ್ದಾರೆ.

ಕರೊನಾ ವಿರುದ್ಧ ನಾವು ಹೋರಾಡುತ್ತಲೇ ಅನ್​ಲಾಕ್​ ಎರಡನೇ ಹಂತಕ್ಕೆ ಪ್ರವೇಶಿಸುತ್ತಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ, ಭಾರತದ ಸ್ಥಿತಿ ಉತ್ತಮವಾಗಿದೆ. ಪಿಎಂ ಗರಿಬ್ ಆನ್ನ ಯೋಜನೆ ನವೆಂಬರ್ ಅಂತ್ಯದವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ 80 ಕೋಟಿ ಜನರಿಗೆ ಪ್ರಯೋಜನಗಳನ್ನು ನೀಡುವ ಈ ಯೋಜನೆ ನವೆಂಬರ್ ವರೆಗೆ ಮುಂದುವರಿಯುತ್ತದೆ ಅಂತ ಹೇಳಿದರು.

ಪ್ರತಿ ಕುಟುಂಬಕ್ಕೆ 5 ಅಕ್ಕಿ ಮತ್ತು ಗೋಧಿ 1 ಕೆಜಿ ಸಕ್ಕರೆ 1 ಕೆಜಿ ಬೇಳೆ ವಿತರಿಸಲಾಗುವುದು ಎಂದರು.ಪ್ರತಿ ಕುಟುಂಬಕ್ಕೆ 5 ಅಕ್ಕಿ ಮತ್ತು ಗೋಧಿ 1 ಕೆಜಿ ಸಕ್ಕರೆ 1 ಕೆಜಿ ಬೇಳೆ ವಿತರಿಸಲಾಗುವುದು ಎಂದರು. ಲಾಕ್​ಡೌನ್​ ಬೆನ್ನಲ್ಲೇ ಗರೀಬ್​ ಕಲ್ಯಾಣ ಯೋಜನೆ ಜಾರಿಗೊಳಿಸಲಾಯಿತು.

20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್​ ಘೋಷಿಸಲಾಗಿದೆ. ರೈತರ ಖಾತೆಗಳಿಗೆ 18 ಸಾವಿರ ಕೋಟಿ ರೂ. ಜಮೆಯಾಗಿದೆ. 9 ಸಾವಿರಕ್ಕೂ ಹೆಚ್ಚು ರೈತರ ಖಾತೆಗಳಿಗೆ ಕಿಸಾನ್​ ಸಮ್ಮಾನ್​ ನಿಧಿ ಹಣವನ್ನು ಜಮೆ ಮಾಡಲಾಗಿದೆ. ಬಡವರ ಖಾತೆಗಳಿಗೆ 31 ಸಾವಿರ ಕೋಟಿ ರೂ. ಜಮೆಯಾಗಿದೆ ಎಂದು ಹೇಳಿದರು.

ಇದೇ ವೇಳೆ ಲಾಕ್​ಡೌನ್​ ಕುರಿತು ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಮತ್ತೆ ಲಾಕ್​ಡೌನ್​ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿದರು.  ನಾವೆಲ್ಲರೂ ಲಾಕ್​ಡೌನ್​ ನಿಯಮ ಪಾಲಿಸಿದ್ದೇವೆ.

ಲಾಕ್​ಡೌನ್​ ನಿಯಮಗಳಿಂದ ಯಾರೂ ಹೊರತಲ್ಲ. ಸಾಮಾನ್ಯನಿಂದ ಪ್ರಧಾನಿಯವರೆಗೂ ಒಂದೇ ನಿಯಮ ಅನ್ವಯವಾಗುತ್ತದೆ. ನಿಯಮ ಉಲ್ಲಂಘಿಸುವವರಿಗೆ ತಿಳುವಳಿಕೆ ಹೇಳಬೇಕು.

ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಬಳಸಿದ್ದೇವೆ. ಆದರೂ ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗ್ರತೆ ತುಂಬಾ ಅವಶ್ಯಕವಾಗಿದೆ. ಕಂಟೈನ್ಮೆಂಟ್​ ಝೋನ್​ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಎಂದು ಕರೆ ನೀಡಿದರು.

#‘ಒನ್ ನೇಷನ್ ಒನ್ ರೇಷನ್ ಕಾರ್ಡ್‘ :

ಯೋಜನೆಯಿಂದ ಭಾರತಕ್ಕೆ ಪಡಿತರ ಚೀಟಿ ವ್ಯವಸ್ಥೆಯಲ್ಲಿ ದೊಡ್ಡ ಲಾಭವೆಂದರೆ ತಮ್ಮ ಗ್ರಾಮವನ್ನು ತೊರೆದು ಉದ್ಯೋಗ ಅಥವಾ ಇತರ ಅಗತ್ಯಗಳಿಗಾಗಿ ಬೇರೆಡೆ ಹೋಗುವ ಬಡ ಸಹೋದ್ಯೋಗಿಗಳಿಗೆ ಉಪಯೋಗವಾಗುತ್ತದೆ

Facebook Comments