ವಿಶ್ವಸಂಸ್ಥೆ 74ನೇ ಸಾಮಾನ್ಯ ಅಧಿವೇಶನ : ನ್ಯೂಯಾರ್ಕ್‍ನಲ್ಲಿ ಮೋದಿ-ಗಣ್ಯರ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ನ್ಯೂಯಾರ್ಕ್, ಸೆ.23- ಅಮೆರಿಕಾದ ಗಗನಚುಂಬಿನಗರಿ ನ್ಯೂಯಾರ್ಕ್‍ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ 74ನೇ ಸಾಮಾನ್ಯ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ದೇಶಗಳ ನಾಯಕರನ್ನು ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆ ಕುರಿತು ಮಹತ್ವದ ಸಮಾಲೋಚನೆ ನಡೆಸುವರು. ಹ್ಯೂಸ್ಟನ್‍ನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ 50 ಸಾವಿರ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಹೂಡಿ ಮೋಡಿ ಭಾಷಣ ಕಾರ್ಯಕ್ರಮದ ನಂತರ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನ್ಯೂಯಾರ್ಕ್‍ನಲ್ಲಿದ್ದಾರೆ.

ನಿನ್ನೆ ರಾತ್ರಿ ನ್ಯೂಯಾರ್ಕ್‍ನ ಜೆಎಫ್‍ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮುಂದಿನ ಐದು ದಿನಗಳ ಕಾಲ ನ್ಯೂಯಾರ್ಕ್‍ನಲ್ಲಿಯೇ ಉಳಿಯಲಿದ್ದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಷಣ ಸೇರಿದಂತೆ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತಂತೆ ಮಾತುಕತೆ ನಡೆಸುತ್ತಿದ್ದಾರೆ.  ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನ ಅಭೂತಪೂರ್ವಕವಾಗಿ ನಡೆಯಲಿದೆ. ಇದರಿಂದ ಸದೃಢವಾದ ಕ್ರಿಯಾ ಆಧಾರಿತ ಪರಿಣಾಮ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ತಿಳಿಸಿದ್ದಾರೆ.

75 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹಾಗೂ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ. ಮುರಳೀಧರನ್ ವಿವಿಧ ವೇದಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಪ್ರಧಾನ ಕೊಠಡಿಯಲ್ಲಿ ಸಂಯುಕ್ತ ರಾಷ್ಟ್ರಗಳ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಆಯೋಜಿಸಿರುವ ಉನ್ನತ ಮಟ್ಟದ ಹವಾಮಾನ ಕ್ರಿಯಾ ಶೃಂಗಸಭೆಯೊಂದಿಗೆ ಮೋದಿಯ ಇಂದಿನ ದಿನದ ಕಾರ್ಯಕ್ರಮ ಆರಂಭವಾಗಲಿದೆ.

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್, ಜರ್ಮನ್ ಛಾನ್ಸೆಲರ್ ಅಂಜಿಲಾ ಮಾರ್ಕೆಲಾ, ಮಾರ್ಷಲ್ ದ್ವೀಪಗಳ ಅಧ್ಯಕ್ಷ ಹಿಲ್ಡಾಹೈನ್ ಅವರೊಂದಿಗೆ ಪ್ರಧಾನಿ ಮೋದಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.  ಮೋದಿ ಭೇಟಿ ಬೇಳೆಯಲ್ಲಿ ಅನೇಕ ದ್ವಿಪಕ್ಷೀಯ ವಿಚಾರಗಳ ಕುರಿತಂತೆ ಸಭೈ ನಡೆಸಲಿದ್ದು, ಸೆಪ್ಟೆಂಬರ್ 27 ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧಿವೇಶನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಹೌಡಿ ಮೋಡಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿ ಅಮೆರಿಕದ ಗಮನ ಸೆಳೆದಿರುವ ಮೋದಿ ಅವರ ಯುಎನ್‍ಜಿಎಯಲ್ಲಿ ಪ್ರಸ್ತಾಪಿಸಲಿರುವ ವಿಷಯಗಳು ಇಡೀ ವಿಶ್ವದ ಕುತೂಹಲ ಕೆರಳಿಸಿದೆ.

Facebook Comments