ಶಾಂತಿ ಕಾಪಾಡಿ : ಪ್ರಧಾನಿ ಸೇರಿ ಗಣ್ಯಾತಿಗಣರ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.9- ಐತಿಹಾಸಿಕ ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟವಾಗುವುದಕ್ಕೆ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಹಾಗೂ ವಿವಿಧ ಧರ್ಮಗಳ ಮುಖಂಡರು ಮತ್ತು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಇಂದು ಬೆಳಗ್ಗೆಯೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಆಯೋಧ್ಯೆ ತೀರ್ಪು ಯಾರಿಗೂ ಗೆಲುವು ಅಥವಾ ಯಾರಿಗೂ ಸೋಲು ಅಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಂಡು ದೇಶದ ಏಕತೆಗಾಗಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.  ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ. ಮನಮೋಹನ್ ಸಿಂಗ್,

ಕೇಂಧ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಹಾಗೂ ಕೇಂದ್ರ ಸಂಪುಟದ ಹಲವು ಸಚಿವರು, ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶಾಂತಿ ಸಂಯಮ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಹಿಂದೂ ಧಾರ್ಮಿಕ ಮುಖಂಡರು ಮತ್ತು ಹಲವು ಮುಸ್ಲಿಂ ಸಂಘಟನೆಗಳ ನಾಯಕರೂ ಸಹ ತೀರ್ಪನ್ನು ಸಂಯಮದಿಂದ ಸ್ವಾಗತಿಸಿ ಕೋಮು ಸಾಮರಸ್ಯ ಕಾಪಾಡುವಂತೆ ಕೋರಿದ್ದಾರೆ.  ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳು, ವಿವಿಧ ಪಕ್ಷಗಳು, ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಶಾಂತಿ ಕದಡದಂತೆ ಮನವಿ ಮಾಡಿದ್ದಾರೆ.

Facebook Comments