ಪ್ರಪಂಚದಲ್ಲೇ ಅತಿ ದೊಡ್ಡ ಲಸಿಕೆ ಆಂದೋಲನ ನಡೆಸಿದ ದೇಶ ಭಾರತ : ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಏ.7- ಆಯುಷ್ಮಾನ್ ಭಾರತ ಮತ್ತು ಪಿಎಂ ಜನೌಷಧಿ ಯೋಜನೆ ಸೇರಿದಂತೆ ಹಲವಾರು ಆರೋಗ್ಯ ಕ್ರಮಗಳನ್ನು ಕೈಗೊಂಡಿರುವುದಲ್ಲದೆ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯಲ್ಲಿರುವ ಭಾರತ ಪ್ರಪಂಚದಲ್ಲೇ ಅತಿ ದೊಡ್ಡ ಲಸಿಕೆ ಆಂದೋಲನ ನಡೆಸಿದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.

ವಿಶ್ವ ಆರೋಗ್ಯ ದಿನದ ಅಂಗವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಜನರು ಆರೋಗ್ಯವಂತರಾಗಿಬೇಕೆಂಬ ಸದ್ದುದ್ದೇಶದಿಂದ ಗುಣಮಟ್ಟದ ಮತ್ತು ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೋವಿಡ್ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈ ಜೋಡಿಸಬೇಕು. ಮಾಸ್ಕ್ ಧರಿಸುವುದು, ಕೈಗಳನ್ನು ತೊಳೆದು ಶುಚಿಯಾಗಿಟ್ಟುಕೊಳ್ಳುವುದು ಸೇರಿದಂತೆ ಹಲವು ಆರೋಗ್ಯ ಕ್ರಮಗಳನ್ನು ಅನುಸರಿಸಬೇಕು. ಸಾಧ್ಯವಾದಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕೊರೊನಾ ಹರಡುವುದನ್ನು ತಪ್ಪಿಸಬೇಕು ಎಂದು ಜನತೆಗೆ ಕರೆ ನೀಡಿದ್ದಾರೆ.

ವಿಶ್ವ ಆರೋಗ್ಯದ ದಿನಾಚರಣೆ ಸಂದರ್ಭದಲ್ಲಿ, ಜನರ ಆರೋಗ್ಯಕ್ಕಾಗಿ ಹಗಲುರಾತ್ರಿ ದುಡಿದ ಆರೋಗ್ಯ ಕ್ಷೇತ್ರದವರೆಲ್ಲರನ್ನೂ ನಾವು ಅಭಿನಂದಿಸಬೇಕಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಮಾಡಲು ತಜ್ಞರು, ವಿಜ್ಞಾನಿಗಳು ಮುಂದಾಗಬೇಕು ಎಂದು ಹೇಳಿದ್ದಾರೆ.

Facebook Comments