ಬೆಳ್ಳಂಬೆಳಿಗ್ಗೆ CM ಬಿಎಸ್ವೈಗೆ PM ಮೋದಿ ದೂರವಾಣಿ ಕರೆ ಮಾಡಿದ್ದೇಕೆ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.11-ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ದೂರವಾಣಿ ಮೂಲಕ ಮಾಹಿತಿ ಪಡೆದರು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿರುವ ಸಿಎಂಗೆ ಇಂದು ಬೆಳಿಗ್ಗೆ ದೂರವಾಣಿ ಕರೆ ಮಾಡಿದ್ದ ನರೇಂದ್ರ ಮೋದಿ ಅವರು ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿ ಕೊರೊನಾ ಸೋಂಕು ತಡೆಗಟ್ಟಲು ಕೆಲವು ಅಮೂಲ್ಯವಾದ ಸಲಹೆಗಳನ್ನು ನೀಡಿದ್ದಾರೆ.

ಕಳೆದ ಎರಡು ವಾರಗಳಿಂದ ರಾಜ್ಯಧಾನಿ ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪಾಸಿಟಿವ್ ಪ್ರಕರಣಗಳ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಮಾಹಿತಿ ಕುರಿತಾಗಿ ಬಿಎಸ್‍ವೈ ಪ್ರಧಾನಿಗಳ ಗಮನಕ್ಕೆ ತಂದಿದ್ದಾರೆ.

ನಿನ್ನೆ ರಾತ್ರಿಯಿಂದಲೇ ಅನ್ವಯವಾಗುವಂತೆ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಮುಂಜಾನೆ 5ರವರೆಗೆ ಕೊರೊನಾ ಕಫ್ರ್ಯೂ ವಿಸಲಾಗಿದೆ. ಅಗತ್ಯಬಿದ್ದರೆ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ರೀತಿಯ ಸಹಕಾರ ಕೊಡಲಿದೆ. ಕೊರೊನಾ ಹೋರಾಟದಲ್ಲಿ ಉತ್ತಮ ಫಲಿತಾಂಶ ಬರುವವರೆಗೂ ಸರ್ಕಾರ ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಉದಾಸೀನ ತೋರಬಾರದು ಎಂದು ಪ್ರಧಾನಿಯವರು ಸಿಎಂಗೆ ಸಲಹೆ ಮಾಡಿದ್ದಾರೆ.

ಕಂಟೋನ್ಮೆಂಟ್ ವಲಯದಲ್ಲಿ ಇನ್ನಷ್ಟು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಿ. ಅಗತ್ಯ ಕಂಡುಬಂದರೆ ಕೇಂದ್ರದಿಂದ ನೆರವು ಪಡೆಯಲು ಹಿಂದೆಮುಂದೆ ನೋಡಬೇಡಿ. ಸಾರ್ವಜನಿಕರ ಆರೋಗ್ಯವು ಮುಖ್ಯ ಎಂದು ಮೋದಿ ಅವರು ಕಿವಿಮಾತು ಹೇಳಿದ್ದಾರೆ.

ನಿನ್ನೆಯಿಂದ ಇದೇ 20ರವರೆಗೆ ಕೊರೊನಾ ಕಫ್ರ್ಯೂ ವಿಸಿದ್ದೇವೆ. ಸದ್ಯಕ್ಕೆ ನಮ್ಮಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಇದಕ್ಕಾಗಿ ಶ್ರಮಿಸಿದ ವೈದ್ಯರು ಮತ್ತು ಸಿಬ್ಬಂದಿಗೆ ನಾನು ಅಬಾರಿಯಾಗಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

Facebook Comments

Sri Raghav

Admin