ಕೊರೋನಾ ಸ್ಥಿತಿ-ಗತಿಗಳ ಕುರಿತು : 10 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಸಂವಾದ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.11-ಮಾರಕ ಕೊರೊನಾ ವೈರಸ್‍ನಿಂದ ಉದ್ಭವಿಸಿರುವ ಪರಿಸ್ಥಿತಿ ಮತ್ತು ಸ್ಥಿತಿ-ಗತಿಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕ ಸೇರಿದಂತೆ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.

ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ಅವರು ನಡೆಸುತ್ತಿರುವ ಏಳನೆ ಸಂವಾದ ಇದಾಗಿದೆ. ಕರ್ನಾಟಕ, ಆಂದ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ಕೈಗೊಂಡಿರುವ ಪ್ರಧಾನಿ ಆಯಾ ರಾಜ್ಯಗಳ ಪರಿಸ್ಥಿತಿಯನ್ನು ಪರಾಮರ್ಶಿಸುತ್ತಿದ್ದಾರೆ.

ಈ ರಾಜ್ಯಗಳಲ್ಲಿ ಕೋವಿಡ್ ವೈರಸ್ ಸೋಂಕು ಮತ್ತು ಸಾವು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಿಡುಗನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮೋದಿ ಕೆಲವು ಸಲಹೆಗಳನ್ನು ನೀಡಿದರು.

ಅಲ್ಲದೆ, ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ ಮತ್ತು ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ವಿಡಿಯೋ ಸಂವಾದ ಕಾರ್ಯಕ್ರಮವಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ಉಪಸ್ಥಿತರಿದ್ದಾರೆ.

ಈ ಹತ್ತು ರಾಜ್ಯಗಳು ಅಕ ಜನಸಂಖ್ಯೆ ಹೊಂದಿದ್ದು, ಕೊರೊನಾ ವೈರಸ್ ಸೋಂಕು ಮತ್ತು ಸಾವಿನ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವಣ ಸಂವಾದ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ.

ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಉಲ್ಬಣಗೊಂಡ ನಂತರ ಪ್ರಧಾನಮಂತ್ರಿ ಮೋದಿ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಏಳನೇ ಸಂವಾದ ಇದ್ದಾಗಿದ್ದು, ಲಾಕ್‍ಡೌನ್-3 ತೆರವುಗೊಳಿಸಿದ ಬಳಿಕ ಪಿಎಂ-ಸಿಎಂಗಳ ಪ್ರಧಾನ ವಿಡಿಯೋ ಸಮಾಲೋಚನೆಯಾಗಿದೆ.

Facebook Comments

Sri Raghav

Admin