ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಆಧುನಿಕ ಭಾರತ ನಿರ್ಮಾಣ : ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಆ.15- ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕೃತಿ ಬೇರೂರುವಂತೆ ಮಾಡುತ್ತದೆ ಮತ್ತು ಅವರನ್ನು ಜಾಗತಿಕ ನಾಗರಿಕರನ್ನಾಗಿ ಸೃಷ್ಟಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

74ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಇಂದು ಬೆಳಗ್ಗೆ ರಾಷ್ಟ್ರೀಯ ತ್ರಿವರ್ಣ ದ್ವಜಾರೋಹಣ ನೆರವೇರಿಸಿ ಪ್ರಧಾನಿ ದೇಶವನ್ನು ಉದ್ದೇಶಿಸಿ ಅವರು ಭಾಷಣ ಮಾಡಿದರು.

ಆತ್ಮನಿರ್ಭರ್, ಆಧುನಿಕತೆ, ನೂತನತೆಯಿಂದ ಮತ್ತು ಸಮೃದ್ಧತೆಯಿಂದ ಭಾರತವನ್ನು ತಯಾರಿಸುವಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ, ಇದೀಗ ನೂವು ಮೂರು ದಶಕಗಳ ಬಳಿಕ ಹೊಸ ಶಿಕ್ಷಣ ನೀತಿಯನ್ನು ದೇಶಾದ್ಯಂತ ಸ್ವಾಗತಿಸಿದ್ದೇವೆ, ಈ ಬೆಳವಣಿಗೆ ಹೊಸ ವಿಶ್ವಾಸವನ್ನು ಮೂಡಿಸಿದೆ ಎಂದು ಪಿಎಂ ಹೇಳಿದರು.

ಆಧುನಿಕ ಭಾರತ ನಿರ್ಮಾಣದಲ್ಲಿ ದೇಶದ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ, ರಾಷ್ಟ್ರೀಯ ಶಿಕ್ಷಣ ನೀತಿ ಎಲ್ಲಾ ವಿದ್ಯಾರ್ಥಿಗಳನ್ನು ಒಂದುಗೂಡಿಸುತ್ತದೆ ಒಂದೇ ರೀತಿಯ ಶಿಕ್ಷಣ ಪಡೆಯುತ್ತಾರೆ ಎಂದು ತಿಳಿಸಿದರು.

Facebook Comments

Sri Raghav

Admin