ವಿಶ್ವಸಂಸ್ಥೆಯ ಮಹಾವೇಶನದಲ್ಲಿ ಮೋದಿ ಭಾಷಣ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಸೆ.25- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ ವಿಶ್ವಸಂಸ್ಥೆ 76ನೇ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನ್ಯೂಯಾರ್ಕ್‍ನಲ್ಲಿ ನಡೆಯುವ ಮಹಾವೇಶನದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅಮೆರಿಕಾಗೆ ತೆರಳಿದ್ದು, ಈಗಾಗಲೇ ಜಾಗತಿಕ ನಾಯಕರ ಜತೆ ಹಲವು ಸುತ್ತುಗಳ ಮಾತುಕತೆ ನಡೆಸಿದ್ದಾರೆ.

ಸಂಜೆ 6.30ಕ್ಕೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ಭಾರತ ವಿಶ್ವಸಂಸ್ಥೆಯ ಅವೇಶನಗಳ ಅಧ್ಯಕ್ಷತೆಯನ್ನು ವಹಿಸುತ್ತಿದೆ. 2019ರಲ್ಲಿಯೂ ಮೋದಿ ವಿಶ್ವಸಂಸ್ಥೆಯ ಅವೇಶನ ಉದ್ದೇಶಿಸಿ ಮಾತನಾಡಿದ್ದರು. ಆದರೆ, ಈ ಬಾರಿ ಅಧ್ಯಕ್ಷತೆಯ ಜವಾಬ್ದಾರಿ ಹೊಂದಿರುವುದರಿಂದ ಮೋದಿ ಅವರ ಮಾತಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ.

109 ದೇಶಗಳ ಮುಖ್ಯಸ್ಥರು ಈ ಅವೇಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. 60 ದೇಶಗಳ ಮುಖ್ಯಸ್ಥರು ಮುದ್ರಿತ ಭಾಷಣವನ್ನು ಪ್ರಸಾರ ಮಾಡಲಿದ್ದಾರೆ. ಕೋವಿಡ್ ಸಂದರ್ಭದಲ್ಲಿ ನಡೆಯುತ್ತಿರುವ ಅವೇಶನ ಜಗತ್ತಿನ ಗಮನ ಸೆಳೆದಿದೆ.

Facebook Comments