ಹತ್ರಾಸ್ ಗ್ಯಾಂಗ್ ರೇಪ್ : ಯೋಗಿಗೆ ಮೋದಿ ಕೊಟ್ಟ ಸೂಚನೆ ಏನುಗೊತ್ತೆ..?

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ ಲಕ್ನೋ, ಸೆ.30- ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ನಡೆದ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆ ವಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸೂಚನೆ ನೀಡಿದ್ದಾರೆ.

ಇಂದು ಬೆಳಗ್ಗೆ ಯೋಗಿ ಆದಿತ್ಯನಾಥ ಅವರೊಂದಿಗೆ ದೂರವಾಣಿ ಮುಖೇನ ಮಾತನಾಡಿದ ಮೋದಿ, ಘಟನೆ ಬಗ್ಗೆ ಹೆಚ್ಚುವರಿ ಮಾಹಿತಿ ಪಡೆದು ಈ ಸೂಚನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಗ್ಯಾಂಗ್ ರೇಪ್ ನೀಚರ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನಿಯವರು ಸೂಚನೆ ನೀಡಿದ್ದಾರೆ ಎಂದರು.

ಈ ಪ್ರಕರಣದ ತನಿಖೆಗಾಗಿ ಮೂರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಲಾಗಿದ್ದು , 7 ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು. ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಲಾಗುತ್ತದೆ. ಈ ಘಟನೆ ಸಂಬಂಧ ನಾಲ್ವರನ್ನು ಬಂಸಲಾಗಿದ್ದು , ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಅತ್ರಾಸ್ ಘಟನೆಯನ್ನು ಪ್ರತಿಭಟಿಸಿ ಉತ್ತರ ಪ್ರದೇಶ, ನವದೆಹಲಿ ಸೇರಿದಂತೆ ದೇಶದ ವಿವಿಧೆಡೆ ವ್ಯಾಪಕ ಆಕ್ರೋಶ ಭುಗಿಲೆದ್ದಿದ್ದು , ಪ್ರತಿಭಟನೆಗಳು ನಡೆಯುತ್ತಿವೆ.

ಈ ಬಗ್ಗೆ ಮೃತಪಟ್ಟ ಸಂತ್ರಸ್ತೆಯ ಕುಟುಂಬದವರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಅಂತ್ಯಕ್ರಿಯೆ ನಡೆಸಲು ಪೊಲೀಸರು ಅವಕಾಶ ನೀಡಲಿಲ್ಲ. ನಮ್ಮ ವಿರೋಧವನ್ನು ಕ್ಕರಿಸಿ ರಾತ್ರೋ ರಾತ್ರಿ ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Facebook Comments

Sri Raghav

Admin