ಮನಮೋಹನ್ ಸಿಂಗ್ ಆರೋಗ್ಯ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಅ.14- ಅನಾರೋಗ್ಯದಿಂದ ಏಮ್ಸ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಮನಮೋಹನ್‍ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ಮನಮೋಹನ್ ಸಿಂಗ್ ಅವರು ನಿನ್ನೆ ಏಮ್ಸ್‍ಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮನಮೋಹನ್‍ಸಿಂಗ್ ಅವರಿಗೆ ದೇವರು ಉತ್ತಮ ಆರೋಗ್ಯ ಕೊಡಲಿ ಮತ್ತು ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಕ್ ಮಾಂಡವೀಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಪ್ರಧಾನಿ ಅವರ ಆರೋಗ್ಯ ವಿಚಾರಿಸಿದರು.

Facebook Comments