ಸೋನಿಯಾ ಗಾಂಧಿ 72ನೇ ಹುಟ್ಟುಹಬ್ಬ : ಪ್ರಧಾನಿ ಮೋದಿ ಸೇರಿ ಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Modi--011

ನವದೆಹಲಿ, ಡಿ.9-ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು 72ನೇ ಜನ್ಮದಿನದ ಸಂಭ್ರಮ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಸೋನಿಯಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಮಾಜಿ ರಾಷ್ಟ್ರಪತಿ ಡಾ. ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ.ಎಂ.ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಲೋಕಸಭೆ ಸಂಸದೀಯ ನಾಯಕ ಡಾ. ಎಂ. ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ವಿರೋಧಪಕ್ಷದ ಮುಖಂಡ ಗುಲಾಂ ನಬಿ ಆಜಾದ್, ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಮುಖಂಡರು ಸೋನಿಯಾಗೆ ಜನ್ಮದಿನದ ಶುಭಾಶಯ ಕೋರಿ ಹಾರೈಸಿದ್ದಾರೆ.

ಸೋನಿಯಾ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ನಾನು ಶುಭಾಶಯ ಕೋರುತ್ತೇನೆ. ಅವರಿಗೆ ದೇವರು ಆಯುರಾರೋಗ್ಯ ಕರುಣಿಸಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಸೋನಿಯಾ ಅವರಿಗೆ ಶುಭ ಕೋರಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಸೋನಿಯಾರನ್ನು ಮಮತಾ ಭೇಟಿ ಮಾಡುವ ಕಾರ್ಯಕ್ರಮವಿದೆ.

Facebook Comments

Sri Raghav

Admin