ಮೋದಿಯಿಂದ ನೀತಿ ಸಂಹಿತೆ ಉಲ್ಲಂಘನೆ, ಆಯೋಗಕ್ಕೆ ಟಿಎಂಸಿ ದೂರು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 19-ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಲೋಕಸಭಾ ಚುನಾವಣೆಯ ಕೊನೆಯ ಹಾಗೂ 7ನೇ ಸುತ್ತಿನ ಮತದಾನ ಇಂದು ನಡೆಯುತ್ತಿದ್ದು, ಪ್ರಧಾನಿಯವರು ಕೇದಾರ್‍ನಾಥ್ ಭೇಟಿ ನೀಡಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ದೂರಿದೆ.

ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿಯವರು ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರೆ ಮತದಾರರ ಮೇಲೆ ಗಾಢವಾದ ಪರಿಣಾಮ ಬೀರುತ್ತದೆ. ಕೂಡಲೇ ಅವರ ಮೇಲೆ ದೂರು ದಾಖಲಿಸುವಂತೆ ಆಗ್ರಹಿಸಿದೆ.

ದೇಶದ ಯಾವುದೇ ಭಾಗದಲ್ಲಿ ಅಥವಾ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದರೆ, ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವುದಕ್ಕೆ ಆಯೋಗ ನಿರ್ಬಂಧ ವಿಧಿಸಿದೆ. ಯಾವ ಕಾರಣಕ್ಕಾಗಿ ಮೋದಿಯವರಿಗೆ ಮಾತ್ರ ಆಯೋಗ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಲಾಗಿದೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್‍ನಲ್ಲಿರುವ ಹಿಂದೂಗಳ ಪವಿತ್ರ ಶ್ರದ್ಧಾ ಕೇಂದ್ರ ಕೇದಾರ್‍ನಾಥ್‍ಗೆ ಭೇಟಿ ನೀಡಿದ್ದರು. ದೇವರ ದರ್ಶನ ನಂತರ ಅವರು ರಾತ್ರಿಯಿಡೀ ದೇವಾಲಯದಲ್ಲಿ ಧ್ಯಾನದಲ್ಲಿ ತೊಡಗಿದ್ದರು.

ಇಂದು 8 ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಮತದಾರರನ್ನು ಭಾವನಾತ್ಮಕವಾಗಿ ಸೆಳೆಯಬಹುದೆಂಬ ಆತಂಕ ಪ್ರತಿಪಕ್ಷಗಳಲ್ಲಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin