ಮಗನ ಮೇಲೆ ನಂಬಿಕೆಯಿಟ್ಟ ದೇಶದ ಜನತೆಗೆ ಮೋದಿ ತಾಯಿ ಹೀರಾ ಕೃತಜ್ಞತೆ

ಈ ಸುದ್ದಿಯನ್ನು ಶೇರ್ ಮಾಡಿ

ಅಹಮದಾಬಾದ್, ಮೇ 23-ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಪ್ರಧಾನಿ ಅವರ ತಾಯಿ ಹೀರಾ ಬೆನ್ ದೇಶದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಬಿಜೆಪಿ 340ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿ ಮೋದಿ ಮತ್ತೆ ಪ್ರಧಾನಿಯಾಗುವುದು ಖಚಿತವಾಗುತ್ತಿದ್ದಂತೆ ಹೀರಾ ಬೆನ್ ದೇಶದ ಜನತೆಗೆ ಧನ್ಯವಾದ ಹೇಳಿದರು.

ಬಿಜೆಪಿ ಪಕ್ಷ ಮತ್ತು ನನ್ನ ಮಗನನ್ನು ಮತ್ತೊಮ್ಮೆ ನೀವು ಅಧಿಕಾರಕ್ಕೆ ತಂದಿದ್ದೀರಿ. ನಿಮ್ಮ ಮತದಾನಕ್ಕಾಗಿ ನಿಮ್ಮೆಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೀರಾ ಬೆನ್ ಹೇಳಿದ್ದಾರೆ. [ LOKSABHA ELECTIONS 2019 RESULT – Live Updates]

# ವಾರಣಾಸಿಯಲ್ಲಿ ಮೋದಿಗೆ ಭಾರೀ ಗೆಲುವು : ಉತ್ತರ ಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್‍ನ ಅಜಯ್‍ರಾಯ್ ಅವರನ್ನು 1.25ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮೋದಿ ಪರಾಭವಗೊಳಿಸಿದ್ದಾರೆ.

ಈ ಗೆಲುವಿನೊಂದಿಗೆ ಮೋದಿ ಎರಡನೇ ಸಲ ವಾರಣಾಸಿಯಿಂದ ಚುನಾಯಿತರಾಗಿದ್ದು, ಪ್ರಧಾನಿಯಾಗಿ ದ್ವಿತೀಯ ಬಾರಿಗೆ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ನಿರೀಕ್ಷೆಯಂತೆ ಮೋದಿ ವಾರಣಾಸಿಯಲ್ಲಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. [ LOKSABHA ELECTIONS 2019 RESULT – Live Updates]

ಏಳನೇ ಮತ್ತು ಕೊನೆಯ ಹಂತದ ಲೋಕಸಭಾ ಚುನಾವಣೆ ವೇಳೆ ಮೋದಿ ವಾರಣಾಸಿಯಲ್ಲಿ ನಡೆಸಿದ ರೋಡ್‍ಶೋಗೆ ಅಸಂಖ್ಯಾತ ಬೆಂಬಲಿಗರು ಮತ್ತು ಕಾರ್ಯಕರ್ತರಿಂದ ಭಾರೀ ಬೆಂಬಲ ದೊರೆತಿತ್ತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin