ಮೇ 30ಕ್ಕೆ ಮೋದಿ ಪಟ್ಟಾಭಿಷೇಕ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 24-ಲೋಕಸಭಾ ಚುನಾವಣೆಯಲ್ಲಿ ಅನೇಕ ದಾಖಲೆಗಳೊಂದಿಗೆ ಜಯ ದುಂದುಭಿ ಮೊಳಗಿಸಿರುವ ಪ್ರಧಾನಿ ನರೇಂದ್ರ ಮೋದಿ ಮೇ 30ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಭರ್ಜರಿ ಬಹುಮತದೊಂದಿಗೆ ಕೇಂದ್ರದಲ್ಲಿ ಎರಡನೇ ಬಾರಿ ಅಧಿಕಾರಕ್ಕೇರಲಿರುವ ಎನ್‍ಡಿಎ ಸರ್ಕಾರದ ಸಾರಥ್ಯವನ್ನು ಮತ್ತೊಮ್ಮೆ ವಹಿಸಲಿರುವ ಮೋದಿ ಮೇ 30 ಗುರುವಾರ ಸಂಜೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ಹೇಳಿವೆ.

ರಾಜಧಾನಿ ದೆಹಲಿಯಲ್ಲಿ ಸಂಜೆ 5 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೋದಿಗೆ ಪ್ರಮಾಣ ವಚನ ಬೋಧಿಸುವರು.

ಮೇ 26ರಂದು ಮೋದಿ ಪ್ರಮಾಣ ವಚನ ಸ್ವೀಕರಿಸುವ ಎಂದು ಹೇಳಲಾಗಿತ್ತಾದರೂ ಈ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮೇ 30ಕ್ಕೆ ಮುಂದೂಡಲಾಗಿದೆ. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ ನಂತರ ಮೋದಿ ಮೇ 26ರಂದು ಪ್ರಮಾಣ ವಚನ ಸ್ವೀಕರಿಸಿದ್ದರು.

ಮೇ 30ರ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಮೋದಿ ಗುಜರಾತ್‍ಗೆ ತೆರಳಿ ತಮ್ಮ ತಾಯಿ ಹಿರಾ ಬೆನ್ ಅವರ ಆಶೀರ್ವಾದ ಪಡೆಯಲಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿವಿಧ ದೇಶಗಳ ಅಧ್ಯಕ್ಷರು, ಪ್ರಧಾನಮಂತ್ರಿಗಳು ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಖ್ಯಾತನಾಮರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ