7 ರಾಜ್ಯಗಳ ಸಿಎಂಗಳ ಜತೆ ಸೆ.23ರಂದು ಮೋದಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಸೆ.20- ಸಾಂಕ್ರಾಮಿಕ ರೋಗ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಸೆ.23ರಂದು ಮಹಾರಾಷ್ಟ್ರ, ದೆಹಲಿ ಮತ್ತುಉತ್ತರ ಪ್ರದೇಶ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರಮೋದಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಈ ಪರಿಶೀಲನಾ ಸಭೆಯಲ್ಲಿ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ, ಆಯಾ ರಾಜ್ಯಗಳಲ್ಲಿ ಕೋವಿಡ್‍ನಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಲಿದ್ದು, ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಮತ್ತಷ್ಟು ಪರಿಣಾಮಕಾರಿಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 92,605 ಹೊಸ ಪ್ರಕರಣಗಳೂ ಸೇರಿ ದೇಶದಲ್ಲಿ ಕೋವಿಡ್ ಪ್ರಕರಣಗಳು 54 ಲಕ್ಷ ಗಡಿ ದಾಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ಈ ಸಭೆ ಕರೆದಿದ್ದಾರೆ ಎಂದು ತಿಳಿದು ಬಂದಿದೆ. ದೇಶದಲ್ಲಿ ಸೋಂಕಿನಿಂದ 86,752 ಜನರು ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಕೇಂದ್ರ ಸಚಿವರು ಮತ್ತು ರಾಜ್ಯ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ಕಳೆದ ಆ.11 ರಂದು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜÁಬ್, ಬಿಹಾರ ಸೇರಿದಂತೆ 10 ಹೆಚ್ಚು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.

Facebook Comments