ವಿಷಾಹಾರ ಸೇವಿಸಿ ಒಂದೇ ಕುಟುಂಬದ ಮೂವರ ಸಾವು
ಈ ಸುದ್ದಿಯನ್ನು ಶೇರ್ ಮಾಡಿ
ಚಿತ್ರದುರ್ಗ,ಜು.13-ವಿಷಾಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಇಸಾಮುದ್ರಾ ಗ್ರಾಮದಲ್ಲಿ ನಡೆದಿದೆ. ತಿಪ್ಪಾನಾಯ್ಕ (45), ಪತ್ನಿ ಸುಧಾಬಾಯಿ ಹಾಗೂ ತಾಯಿ ಗುಂಡಿಬಾಯಿ (75) ಮೃತಪಟ್ಟ ದುರ್ದೈವಿಗಳು.
ಕಳೆದ ರಾತ್ರಿ ಮುದ್ದೆ ಹಾಗೂ ಕಾಳು ಸಾರು ಊಟ ಮಾಡಿ ಮಲಗಿದ್ದರು. ತಡರಾತ್ರಿ ಇದ್ದಕ್ಕಿದ್ದಂತೆ ಮೂವರೂ ಅಸ್ವಸ್ಥರಾಗಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.
ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮಕ್ಕಳಾದ ರಮ್ಯ ಹಾಗೂ ರಾಹುಲ್ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಭರಮಸಾಗರ ಠಾಣೆ ಪಿಎಸ್ಐ ರಾಜು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Facebook Comments