ಅನಗತ್ಯ ಓಡಾಟಕ್ಕೆ ಲಾಗಮ್ ಹಾಕಲು ಪೊಲೀಸರಿಗೆ ಸೂಚನೆ: ಗೃಹ ಸಚಿವ ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 20- ರಾಜ್ಯದಲ್ಲಿ ಅನಗತ್ಯ ಓಡಾಟಕ್ಕೆ ಲಾಗಮ್ ಹಾಕಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು,ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ತೆಗೆದುಕೊಳ್ಳಲು ಪೋಲಿಸರಿಗೆ ಸೂಚನೆ ಕೊಡಲಾಗಿದೆ ಎಂದರು.

ಮನೆಯಿಂದ ಅನಗತ್ಯವಾಗಿ ಹೊರ ಬರುವ ಮುನ್ನ ಎಚ್ಚರಿಕೆಯಿಂದ ಇರಬೇಕು.ರಾಜ್ಯದಲ್ಲಿ ಕೋವಿಡ್ ಕೇಸ್ ಜಾಸ್ತಿಯಾಗುತ್ತಿದೆ.ಜನ ಕೋವಿಡ್ ನಿಯಮ ಪಾಲನೆ ಮಾಡುತ್ತಿಲ್ಲ ಎಂಬ ಅಸಮಾಧಾನ ಹೊರಹಾಕಿದರು.

ಜಿಲ್ಲೆಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಇದ್ರು ಜನ ಅನಗತ್ಯ ಓಡಾಟ ನೆಡೆಸುತ್ತಿದ್ದಾರೆ.ಇದರಿಂದ ಲಾಕ್ ಡೌನ್ ಯಶಸ್ವಿ ಮಾಡಲು ಪೊಲೀಸರಿಂದ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಂಡಿದ್ದಾರೆ ಎಂದು ಸಮಥಿ೯ಸಿಕೊಂಡರು.

ವಾಹನಗಳ ಜಪ್ತಿ ಮಾಡಿ ಪ್ರಕರಣ ದಾಖಲಿಸಿ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಬೊಮ್ಮಯಿ ಅವರು ಎಚ್ಚರಿಕೆ ನೀಡಿದರು. ಲಾಕ್ ಡೌನ್ ವಿಸ್ತರಿಸುವ ವಿಚಾರದಲ್ಲಿ ಸಿಎಂ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಮೇ೨೩ ರ ಒಳಗೆ ಈ ಸಂಬಂದ ಸಿಎಂ ಚರ್ಚಿಸಿ ಸೂಕ್ತ ನಿರ್ಧಾರ ಪ್ರಕಟಿಸುತ್ತಾರೆ ಎಂದರು. ಪ್ಯಾಕೇಜ್ ಘೋಷಣೆಯ ವಿಚಾರದಲ್ಲಿ ಅಪಸ್ವರ ಸರಿಯಲ್ಲ ಎಂದು ಆಕ್ಷೇಪಿಸಿದರು.

ರಾಜ್ಯದ ಪ್ರಸ್ತುತ ಆರ್ಥಿಕ ಮಿತಿಯಲ್ಲಿ ಉತ್ತಮ ಪರಿಹಾರ ಪ್ರಕಟಿಸಿದ್ದಾರೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಬಿದ್ದರೆ ಸೂಕ್ತ ನಿರ್ಧಾರ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.

Facebook Comments