ಮತ ಎಣಿಕೆ ಕಾರ್ಯಕ್ಕೆ ಸೂಕ್ತ ಬಂದೋಬಸ್ತ್ : ಸುನೀಲ್‍ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 20-ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕೆ ಸೂಕ್ತ ಬಂದೋಬಸ್ತ್ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೇ 23ರ ಬೆಳಗ್ಗೆ 6 ರಿಂದ ಮೇ 24ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 23ರಂದು ನಡೆಯಲಿರುವ ಮತ ಎಣಿಕೆ ದಿನದಂದು ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮತಎಣಿಕೆ ಕೇಂದ್ರಗಳಿಗೆ 2 ಪ್ಯಾರಾ ಮಿಲಿಟರಿ ಪಡೆ, 7 ಡಿಸಿಪಿ, 22 ಎಸಿಪಿ, 77 ಇನ್ಸ್‍ಪೆಕ್ಟರ್, 180 ಸಬ್‍ಇನ್ಸ್‍ಪೆಕ್ಟರ್, 2 ಸಾವಿರ ಪೊಲೀಸ್ ಸಿಬ್ಬಂದಿ, 23 ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಲಾಗುವುದು ಎಂದರು.

ಪ್ರತಿ ಮತಗಟ್ಟೆ ಕೇಂದ್ರದಿಂದ 100 ಮೀಟರ್‍ವರೆಗೂ ಬೌಂಡ್ರಿ ನಿರ್ಮಾಣ ಮಾಡಲಾಗುತ್ತದೆ. ಗುರುತಿನ ಚೀಟಿ ಉಳ್ಳವರಿಗೆ ಮಾತ್ರ ಮತ ಎಣಿಕೆ ಕೇಂದ್ರಗಳಿಗೆ ಪ್ರವೇಶವಿರುತ್ತದೆ. ಮಾಧ್ಯಮದವರು ಮಾಧ್ಯಮದ ಕೇಂದ್ರವರೆಗೆ ಮಾತ್ರ ಪ್ರವೇಶಿಸಲು ಅವಕಾಶವಿದೆ ಎಂದರು.

Facebook Comments