ಬಾಗಲಕೋಟೆ : ಎಸ್‍ಪಿ ನಿವಾಸದೆದುರೇ ಕಾನ್‍ಸ್ಟೆಬಲ್ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Police-Suicide

ಬಾಗಲಕೋಟೆ,ಡಿ.1-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್‍ಪಿ) ನಿವಾಸದ ಮುಂದೆಯೇ ಕಾನ್‍ಸ್ಟೆಬಲ್ ಒಬ್ಬರು ರಿವಾಲ್ವರ್‍ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕೊಪ್ಪಳ ಜಿಲ್ಲೆ ಯ ಮಿಟ್ಟಲಕೋಡ ಗ್ರಾಮದ ಮಂಜುನಾಥ್ ಹರಿಜನ್(26) ಆತ್ಮಹತ್ಯೆ ಮಾಡಿಕೊಂಡ ಕಾನ್‍ಸ್ಟೆಬಲ್. ಕರ್ತವ್ಯಕ್ಕೆ ನೀಡಲಾಗಿದ್ದ 303 ರೈಫಲ್‍ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಕಳೆದ ಒಂದೂವರೆ ವರ್ಷದಿಂದ ಬಾಗಲಕೋಟೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬಾಗಲಕೋಟೆಯ ಎಸ್‍ಪಿ ಸಿ.ಬಿ ರಿಷ್ಯಂತ್ ನಿವಾಸಕ್ಕೆ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಎಸ್‍ಪಿ ಮನೆ ಎದುರೇ ಕರ್ತವ್ಯಕ್ಕೆಂದು ನೀಡಲಾಗಿದ್ದ ರೈಫಲ್ 303ಯಿಂದ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದ ತಕ್ಷಣ ಎಸ್‍ಪಿ ರಿಷ್ಯಂತ್ ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಪೊಲೀಸ್ ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾನ್‍ಸ್ಟೆಬಲ್ ಆತ್ಮಹತ್ಯೆ ಮಾಡಿಕೊಳ್ಳಲು ಇನ್ನು ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮೃತನ ಸಂಬಂಧಿಗಳು ಹಾಗೂ ಆತನ ಸ್ನೇಹಿತರೊಂದಿಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್‍ಪಿ ರಿಷ್ಯಂತ್ ತಿಳಿಸಿದ್ದಾರೆ.

Facebook Comments

Sri Raghav

Admin