ಕರ್ತವ್ಯನಿರತ ಪೊಲೀಸ್ ಕಾನ್‍ಸ್ಟೆಬಲ್ ನಿಗೂಢ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು,ಏ.19- ಕರ್ತವ್ಯನಿರತ ಕಾನ್‍ಸ್ಟೆಬಲ್‍ವೊಬ್ಬರು ಠಾಣೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗೇಶ್(31) ಸಾವನ್ನಪ್ಪಿರುವ ಕಾನ್‍ಸ್ಟೆಬಲ್.

ನಿನ್ನೆ ರಾತ್ರಿ ಎಂದಿನಂತೆ ಯೋಗೇಶ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮಧ್ಯರಾತ್ರಿ ಸಾವನ್ನಪ್ಪಿದ್ದು, ಹಲವು ಅನುಮಾನಗಳು ವ್ಯಕ್ತವಾಗಿವೆ. ಸುದ್ದಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯೋಗೇಶ್ ನಿದ್ದೆ ಮಾತ್ರೆ ಅಥವಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ವರದಿ ಬಂದ ನಂತರವಷ್ಟೇ ಸಾವು ಹೇಗೆ ಸಂಭವಿಸಿದೆ ಎಂಬುದು ಗೊತ್ತಾಗಲಿದೆ.
ಈ ಬಗ್ಗೆ ಎನ್.ಆರ್.ಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments