ಉಪ್ಪಾರಪೇಟೆ ಸಬ್‍ಇನ್‍ಸ್ಪೆಕ್ಟರ್ ಗೆ ಕೊರೊನಾ ಪಾಸಿಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.30- ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರನ್ನು ಚಿಕಿತ್ಸೆಗಾಗಿ ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸಬ್‍ಇನ್‍ಸ್ಪೆಕ್ಟರ್ ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚಿ ಕ್ವಾರಂಟೈನ್ ಮಾಡಲಾಗುತ್ತದೆ.

ಈಗ ಉಪ್ಪಾರಪೇಟೆ ಠಾಣೆಗೆ ರಾಸಾಯನಿಕ ಸಿಂಪಡಿಸಿ ಸೀಲ್‍ಡೌನ್ ಮಾಡಲಾಗಿದೆ. ಇದೇ ಠಾಣೆಯ ಕಟ್ಟಡದ ಮೇಲ್ಭಾಗದಲ್ಲಿರುವ ಪಶ್ಚಿಮ ವಿಭಾಗದ ಡಿಸಿಪಿ ಕಚೇರಿಯನ್ನು ಈಗಾಗಲೇ ಸೀಲ್‍ಡೌನ್ ಮಾಡಲಾಗಿದೆ.  ಕಾರಣ ಆ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಕಂಡುಬಂದಿದ್ದರ ಹಿನ್ನೆಲೆಯಲ್ಲಿ ಆ ಕಚೇರಿಯನ್ನೂ ಸೀಲ್‍ಡೌನ್ ಮಾಡಲಾಗಿದೆ.

Facebook Comments