ಕೊಲೆ ಆರೋಪಿ ಹಾಗೂ ರೌಡಿ ಲಗ್ಗೆರೆ ಸೀನನ ಮೇಲೆ ಪೊಲೀಸರ ಫೈರಿಂಗ್ .!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.4- ಕೊಲೆ ಆರೋಪಿ ಹಾಗೂ ರೌಡಿಯೊಬ್ಬ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಲ್ಲೇಶ್ವರಂ ಠಾಣೆ ಇನ್‍ಸ್ಪೆಕ್ಟರ್ ಕೆ.ಆರ್.ಪ್ರಸಾದ್ ಹಾರಿಸಿದ ಗುಂಡೇಟನಿಂದ ಆರೋಪಿ ಶ್ರೀನಿವಾಸ್ ಅಲಿಯಾಸ್ ಲಗ್ಗೆರೆ ಸೀನ(28) ಗಾಯಗೊಂಡಿದ್ದಾನೆ.

ವೈಯಾಲಿ ಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲೇಶ್ವರಂ 8ನೇ ಕ್ರಾಸ್‍ನಲ್ಲಿ ಎಲೆಕ್ಟ್ರಿಶಿಯನ್ ಗಣೇಶ್ ಎಂಬುವರು ಕಳೆದ 17ರಂದು ರಾತ್ರಿ 12 ಗಂಟೆ ಸುಮಾರಿನಲ್ಲಿ ನಡೆದು ಹೋಗುತ್ತಿದ್ದರು.

ಆಗ ಒಂದೇ ಬೈಕ್‍ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರ ಕುತ್ತಿಗೆಗೆ ಲಾಂಗ್ ಬೀಸಿ ಕೊಲೆ ಮಾಡಿ ನಂತರ ಸ್ವಲ್ಪ ದೂರ ಹೋಗಿ ಅಂಗಡಿ ಬಾಗಿಲು ಹಾಕಿ ನಿಂತಿದ್ದ ಮಾಲೀಕನ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಈ ಬಗ್ಗೆ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಅವರು ಕೊಲೆ ಆರೋಪಿಗಳನ್ನು ಬಂಧಿಸಲು ಮಲ್ಲೇಶ್ವರಂ ಠಾಣೆ ಹಾಗೂ ವೈಯಾಲಿಕಾವಲ್ ಠಾಣೆ ಇನ್‍ಸ್ಪೆಕ್ಟರ್ ಅವರನ್ನೊಳಗೊಂಡ ತಂಡವೊಂದನ್ನು ರಚಿಸಿದ್ದರು.

ತಂಡ ಈ ಆರೋಪಿಗಳಿಗಾಗಿ ಶೋಧ ನಡೆಸುತ್ತಿತ್ತು. ಈ ನಡುವೆ ಇಂದು ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಆರೋಪಿ ಲಗ್ಗೆರೆ ಸೀನ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಗಂಗೊಂಡನಹಳ್ಳಿ ಮುಖ್ಯರಸ್ತೆಯ ತಿಪ್ಪೇನಹಳ್ಳಿ ಬಳಿ ಇದ್ದಾನೆ ಎಂದು ಖಚಿತ ಮಾಹಿತಿ ಬಂದಿದೆ.

ಮಲ್ಲೇಶ್ವರ ಠಾಣೆ ಇನ್‍ಸ್ಪೆಕ್ಟರ್ ಪ್ರಸಾದ್ ಮತ್ತು ಹೆಡ್‍ಕಾನ್‍ಸ್ಟೆಬಲ್ ಸುನೀಲ್‍ಕುಮಾರ್ ಮತ್ತು ಅವರ ಸಿಬ್ಬಂದಿ ಅಲ್ಲಿಗೆ ತೆರಳಿ ಆರೋಪಿಯನ್ನು ಹಿಡಿಯಲು ಹೋದಾಗ ಸುನೀಲ್‍ಕುಮಾರ್ ಮೇಲೆ ಹಲ್ಲೆ ಮಾಡಿದ.

ತಕ್ಷಣ ಇನ್‍ಸ್ಪೆಕ್ಟರ್ ಅವರುಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದರೂ ಆರೋಪಿ ದಾಳಿಗೆ ಮುಂದಾದಾಗ ಆತ್ಮರಕ್ಷಣೆಗಾಗಿ ಅವರು ಹಾರಿಸಿದ ಗುಂಡು ಆತನ ಬಲಗಾಲಿಗೆ ಬಿದ್ದಿದೆ.

ಗುಂಡೇಟಿನಿಂದ ಗಾಯಗೊಂಡು ಕುಸಿದುಬಿದ್ದ ಲಗ್ಗೆರೆ ಸೀನನನ್ನು ಸುತ್ತುವರೆದ ಪೆÇಲೀಸರು ವಶಕ್ಕೆ ತೆಗೆದುಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ ಕಾನ್‍ಸ್ಟೆಬಲ್ ಸುನೀಲ್‍ಕುಮಾರ್ ಅವರನ್ನು ಸಹ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಆರೋಪಿ ಲಗ್ಗೆರೆ ಸೀನನ ವಿರುದ್ದ ಮೂರು ಕೊಲೆ ಪ್ರಕರಣ, ಮೂರು ಕೊಲೆ ಯತ್ನ, ದರೋಡೆ ಪ್ರಕರಣ ಸೇರಿದಂತೆ ನಗರಾದ್ಯಂತ 8ರಿಂದ 10 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin