ಬೆಂಗಳೂರು ಪಶ್ಚಿಮ ವಿಭಾಗದ ಇನ್ಸ್‌ಪೆಕ್ಟರ್‌ಗೆ ಕೊರೊನಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.6- ಕೊರೊನಾ ವಾರಿಯರ್ಸ್‍ಗಳಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದ್ದು, ನಗರದ ಪಶ್ಚಿಮ ವಿಭಾಗದ ಮತ್ತೊಬ್ಬರು ಪೊಲೀಸ್ ಇನ್‍ಸ್ಪೆಕ್ಟರ್‍ಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ.

ಸೋಂಕು ತಗುಲಿರುವ ಇನ್‍ಸ್ಪೆಕ್ಟರ್ ಅವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬೆಂಗಳೂರು ನಗರ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಈ ಸಂಜೆಗೆ ತಿಳಿಸಿದ್ದಾರೆ.

ಈಗಾಗಲೇ ಈ ವಿಭಾಗದ ಒಬ್ಬರು ಇನ್‍ಸ್ಪೆಕ್ಟರ್ ಹಾಗೂ ಎಸಿಪಿ ಒಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಅವರುಗಳು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಶ್ಚಿಮ ವಿಭಾಗದ ಬಹುತೇಕ ಠಾಣೆಗಳ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆಯಾ ಠಾಣೆಗಳಿಗೆ ರಾಸಾಯನಿಕ ಸಿಂಪಡಿಸಿ ಸೀಲ್‍ಡೌನ್ ಮಾಡಲಾಗಿದೆ. ಈಗಾಗಲೇ ಸೀಲ್‍ಡೌನ್ ಆಗಿದ್ದ ಕೆಲವು ಠಾಣೆಗಳಲ್ಲಿ ಕಾರ್ಯಾರಂಭವಾಗಿದೆ.

Facebook Comments