ಬೆಂಗಳೂರಲ್ಲಿ ಹಲವು ಠಾಣೆಗಳು ಸೀಲ್‍ಡೌನ್, ಪೊಲೀಸರಲ್ಲಿ ಹೆಚ್ಚಿದ ಆತಂಕ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.3- ನಗರದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರಿಗೂ ಆತಂಕ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಪೊಲೀಸ್ ಠಾಣೆಗಳಿಗೆ ರಾಸಾಯನಿಕ ಸಿಂಪಡಿಸಿ ಸೀಲ್‍ಡೌನ್ ಮಾಡಲಾಗಿದೆ.

ಸದಾಶಿವನಗರ: ಕಳ್ಳತನ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿಯನ್ನು ಠಾಣೆಗೆ ಕರೆತಂದು ಕೋವಿಡ್ ಪರೀಕ್ಷೆ ಮಾಡಿಸಿದಾಗ ಈತನಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಈ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಜೆಸಿ ನಗರ: ಈ ಪೊಲೀಸ್ ಠಾಣೆಯ ಎಎಸ್‍ಐ ಒಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಈ ಠಾಣೆಯನ್ನೂ ಸಹ ಸ್ಯಾನಿಟೈಜರ್ ಮಾಡಿ ಸೀಲ್‍ಡೌನ್ ಮಾಡಲಾಗಿದೆ.

ಕೆಪಿ ಅಗ್ರಹಾರ: ಈ ಠಾಣೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಈ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿತ್ತು.
ಇಂದು ಸಂಜೆ ಸೀಲ್‍ಡೌನ್ ತೆರವುಗೊಳಿಸಿ ಈ ಠಾಣೆಯಲ್ಲಿ ಎಂದಿನಂತೆ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ.

ಅನ್ನಪೂರ್ಣೇಶ್ವರಿ ನಗರ: ಕೊಲೆ ಪ್ರಕರಣದಲ್ಲಿ 9 ಆರೋಪಿಗಳನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆತಂದು ಕೋವಿಡ್ ಪರೀಕ್ಷೆ ನಡೆಸಿದಾಗ ಮೂವರು ಆರೋಪಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಈ ಠಾಣೆಯನ್ನು ಸೀಲ್‍ಡೌನ್ ಮಾಡಿ ರಾಸಾಯನಿಕ ಸಿಂಪಡಿಸಲಾಗಿದೆ.

Facebook Comments