ಹು-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಉಚ್ಛಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.28- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನಸಾಮಾನ್ಯರಿಗೆ ವಂಚಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ಕಪ್ಪುಹಣದಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಿಸುವುದಾಗಿ ಸುಳ್ಳು ಹೇಳಿ ಪೂರ್ಣಿಮಾ ಜನರನ್ನು ವಂಚಿಸಿದ್ದರು. ಹಲವರಿಂದ ತಲಾ 10 ಸಾವಿರ ರೂ.ಗಳನ್ನು ವಸೂಲಿ ಮಾಡಿದ್ದರು. ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಹಲವಾರು ಮಂದಿ ಈ ಬಗ್ಗೆ ದೂರು ಕೂಡ ನೀಡಿದ್ದಾರೆ.

ಈ ಪ್ರಕರಣ ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ಬರುತ್ತಿದ್ದಂತೆ ಕೆಂಡಾಮಂಡಲವಾಗಿದ್ದು, ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರನ್ನು ವಂಚಿಸುವ ಮಹಿಳೆ ವಿರುದ್ಧ ಕ್ರಮ ಜರುಗಿಸುವಂತೆ ಸೂಚಿಸಿದ್ದರು.

ಅದರ ಪ್ರಕಾರ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ಇಮ್ರಾನ್ ಎಲಿಗಾರ್ ಅವರು ಪೂರ್ಣಿಮಾರನ್ನು ಉಚ್ಛಾಟನೆ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ರೀತಿ ಶಿಸ್ತು ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ.

Facebook Comments

Sri Raghav

Admin