ಕುಟುಂಬ ಯೋಜನೆಗೆ ಶ್ರಮಿಸಿದ ವೈದ್ಯಕೀಯ ಸಿಬ್ಬಂದಿಗಳಿಗೆ ಸನ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು. 12- ಜನಸಂಖ್ಯಾ ದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕುಟುಂಬ ಯೋಜನೆಗೆ ಶ್ರಮಿಸಿದ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಎಂ.ನಾಗರಾಜ ಅವರು ಜನಸಂಖ್ಯಾ ನಿಯಂತ್ರಣ ಹಾಗೂ ಕುಟುಂಬ ಯೋಜನೆಯ ಪ್ರಾಮುಖ್ಯತೆ ಕುರಿತು ಮಾತನಾಡಿದರು.

ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ.ಕೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಎ.ಎನ್.ಶ್ರೀನಿವಾಸ್, ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು ಮತ್ತಿತರರು ಭಾಗವಹಿಸಿದ್ದರು.

Facebook Comments

Sri Raghav

Admin