ಮುಂಬೈನಲ್ಲಿ ಆರಂತಸ್ಥಿನ ಕಟ್ಟಡ ಕುಸಿದು 6 ಮಂದಿ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ,ಜು.18-ದಕ್ಷಿಣ ಮುಂಬೈನಲ್ಲಿ ಆರು ಅಂತಸ್ತಿನ ಕಟ್ಟಡವೊಂದು ಕುಸಿದು ಆರು ಮಂದಿ ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಮುಂಬೈ ನಗರದ ಫೋರ್ಟ್ ಪ್ರದೇಶದಲ್ಲಿರುವ ಭಾನುಶಾಹಿ ಕಟ್ಟಡ ಬೆಳಗ್ಗೆ 4.15ರಲ್ಲಿ ಕುಸಿದಿದ್ದರಿಂದ ಮನೆಯಲ್ಲಿ ಮಲಗಿದ್ದ ಕೆಲವರು ಜೀವಂತ ಸಮಾಧಿಯಾಗಿದ್ದಾರೆ.

ಭಾರೀ ಶಬ್ದ ಕೇಳಿ ಹೊರಗೋಡಿ ಬಂದ ಅಕ್ಕಪಕ್ಕದ ಜನರು ಅಗ್ನಿಶಾಮಕ ಹಾಗೂ ತುರ್ತು ಸೇವೆ ಸಿಬ್ಬಂಧಿಗೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಪರಿಹಾರ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿದ್ದಾರೆ.

ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಗಾಯಾಳುಗಳನ್ನು ಸರ್ಕಾರಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin