ರಾಜ್ಯಾಧ್ಯಕ್ಷರ ಬದಲಾವಣೆಯಲ್ಲಿ ಆರ್‍ಎಸ್‍ಎಸ್ ಮೂಗು ತೂರಿಸುವುದಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಮೇ 15-ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಆರ್‍ಎಸ್‍ಎಸ್ ಮೂಗು ತೂರಿಸುವುದಿಲ್ಲ ಎಂದು ಆರ್‍ಎಸಸ್ ಸಹಸಂಚಾಲಕ ಪ್ರಭಾಕರ್ ಕಲ್ಲಡ್ಕ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಬದಲಾವಣೆಯನ್ನು ಬಿಜೆಪಿ ನೋಡಿಕೊಳ್ಳುತ್ತದೆ. ಸಂಘಕ್ಕೂ ಅದಕ್ಕೂ ಸಂಬಂಧವಿಲ್ಲ. ಸಂಘದಿಂದ ಯಾರೂ ಕೂಡ ಆಕಾಂಕ್ಷಿಗಳಲ್ಲ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ನಿನ್ನೆ ಚುನಾವಣಾ ಪ್ರಚಾರ ಭಾಷಣದ ವೇಳೆ ನಡೆ ಗಲಭೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಮಿತ್ ಷಾ ಅವರು ಮಾತನಾಡಲು ಅವಕಾಶ ನೀಡುತ್ತಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾತನಾಡುವ ಅವಕಾಶವಿದೆ ಎಂದರು.  ಸರ್ಕಾರ ಏನೂ ಕೆಲಸ ಮಾಡಿಲ್ಲ. ಅದನ್ನು ಮುಚ್ಚಿಕೊಳ್ಳಲು ಇತರರಿಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.

ಹಿಂದೂಗಳು ಮೊದಲ ಟೆರರ್ ಎಂದ ಕಮಲ ಹಾಸ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,ಯಾರ್ಯಾರೋ ಏನೇನೋ ಮಾತನಾಡುತ್ತಾರೆ. ಇದಕ್ಕೆ ಉತ್ತರಿಸುವ ಅಗತ್ಯವಿಲ್ಲ ಎಂದರು.

ಕೇವಲ 37 ಸ್ಥಾನದಲ್ಲಿರುವ ಪಕ್ಷದವರು ಮುಖ್ಯಮಂತ್ರಿಯಾಗಿದ್ದಾರೆಂಬುದು ಸಂವಿಧಾನದ ವಿಡಂಬನೆ. ಕರ್ನಾಟಕ ರಾಜ್ಯದಲ್ಲಿ 70 ವರ್ಷಗಳ ಇತಿಹಾಸದಲ್ಲಿ ಸರ್ಕಾರವೇ ಇಲ್ಲ ಎನ್ನುವ ಸ್ಥಿತಿ ಈಗ ನಿರ್ಮಾಣವಾಗಿದೆ ಎಂದರು. ರಾಜಕೀಯ ಕಿತ್ತಾಟದಿಂದಾಗಿ ಸರ್ಕಾರ ಯಾವಾಗ ಬೇಕಾದರೂ ಬಿದ್ದು ಹೋಗಬಹುದು ಎಂದ ಅವರು, ಮೇ 23ರ ನಂತರವೂ ಸರ್ಕಾರ ಬಿದ್ದು ಹೋಗಬಹುದು ಎಂದು ಮಾರ್ಮಿಕವಾಗಿ ನುಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ