ನಾಯ್ಡು ಕಟ್ಟಿದ ಪ್ರಜಾವೇದಿಕೆ ಕಟ್ಟಡ ನೆಲಸಮಗೊಳಿಸಿದ ಜಗನ್..!

ಈ ಸುದ್ದಿಯನ್ನು ಶೇರ್ ಮಾಡಿ

ಅಮಾರವತಿ, ಜೂ.26- ಆಂಧ್ರಪ್ರದೇಶದ ನೂತನ ಸಿಎಂ ಜಗನ್ ಮೋಹನ್‍ರೆಡ್ಡಿ ಅಧಿಕಾರವೇರಿದ ನಂತರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಪಕ್ಷದ ಚಟುವಟಿಕೆಗಳಿಗೆ ಕೇಂದ್ರವಾಗಿದ್ದ ಪ್ರಜಾವೇದಿಕೆ ಕಟ್ಟಡವನ್ನು ನೆಲಸಮ ಮಾಡಲಾಗಿದೆ.

ಕಳೆದ ಬುಧವಾರ ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ, ಹಲವು ವಿಷಯಗಳ ಚರ್ಚೆ ನಂತರ ವಿರೋಧ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರ ಅಧಿಕಾರಾವಧಿಯಲ್ಲಿ ನಿರ್ಮಾಣವಾದ ಪ್ರಜಾವೇದಿಕೆ ಕಟ್ಟಡದ ಬಗ್ಗೆ ಪ್ರಸ್ತಾಪ ಮಾಡಿದ್ದರು.

ಕಾನೂನುಬಾಹಿರವಾಗಿ ಹಾಗೂ ನಿರ್ಮಾಣದ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ನೆಲಸಮ ಮಾಡುವಂತೆ ಜಗನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಸಿಆರ್‍ಡಿಎ ಉನ್ನತ ಅಧಿಕಾರಿಗಳು, ಎಂಜಿನಿಯರ್‍ಗಳ ಸಮಕ್ಷಮದಲ್ಲಿ ಪ್ರಜಾವೇದಿಕೆಯನ್ನು ನೆಲಸಮ ಮಾಡಲಾಗುತ್ತಿದ್ದು, ಕಟ್ಟಡದಲ್ಲಿದ್ದ ಸಾಮಾಗ್ರಿಯನ್ನು ಅಧಿಕಾರಿಗಳು ಸಚಿವಾಲಯಕ್ಕೆ ಸಾಗಿಸಿದ್ದಾರೆ. ಇತ್ತೀಚೆಗಷ್ಟೇ ಜಗನ್ ಸರ್ಕಾರ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ನೀಡಲಾಗಿದ್ದ ಜೆಡ್ ಪ್ಲಸ್ ಭದ್ರತೆಯನ್ನೂ ವಾಪಾಸ್ ಪಡೆದುಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ