ಹುಟ್ಟುಹಬ್ಬದಂದು ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್‍ ದೇವರಾಜ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.4- ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್‍ದೇವರಾಜ್ ಅವರು ಸರ್ಕಾರಿ ಶಾಲೆಯನ್ನು ದತ್ತುಪಡೆದುಕೊಳ್ಳುವ ಮೂಲಕ ತಮ್ಮ 32ನೆ ಹುಟ್ಟುಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿಕೊಂಡಿದ್ದಾರೆ.

ಈ ಬಾರಿ ಕೆಲವು ಸ್ಟಾರ್ ನಟರುಗಳು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆ ಜನ್ಮದಿನಕ್ಕೆ ಆಗುವ ಹಣವನ್ನು ಸಮಾಜಸೇವೆ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಕರೆ ನೀಡಿದ್ದರು, ಅದೇ ಹಾದಿಯನ್ನು ಪ್ರಜ್ವಲ್ ಕೂಡ ಅನುಸರಿಸಿದ್ದಾರೆ.

ಇತ್ತೀಚೆಗೆ ಪ್ರಜ್ವಲ್ ದೇವರಾಜ್ ತಮ್ಮ ಹುಟ್ಟುಹಬ್ಬದಂದು ಸರ್ಕಾರಿ ಶಾಲೆ ಉಳಿಸಿ ಎಂಬ ಸಂಸ್ಥೆಯ ಜೊತೆ ಕೈ ಜೋಡಿಸಿದ್ದೇನೆ ಎಂದು ಇನ್‍ಸ್ಟಾಗ್ರಾಂನಲ್ಲಿ ಹೇಳಿದ್ದರು, ಅದರಂತೆ ಇಂದು ಅವರು ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದುಕೊಂಡು ಶಾಲೆಯ ಏಳಿಗೆಗೆ ಶ್ರಮಿಸಿದ್ದಾರೆ.

ದಚ್ಚು ಪ್ರಶಂಸೆ:  ಪ್ರಜ್ವಲ್ ದೇವರಾಜ್ ಅವರು ಸರ್ಕಾರಿ ಶಾಲೆಯನ್ನು ದತ್ತುಪಡೆದುಕೊಂಡಿರುವ ವಿಷಯ ಕೇಳಿ ಬಹಳ ಸಂತೋಷವಾಗಿದೆ. ಇಂಥ ಸಾಮಾಜಿಕ ಕಳಕಳಿಯ ಕೆಲಸಗಳಲ್ಲಿ ಅವರು ಹೀಗೆ ಸದಾ ಮುಂಚೂಣಿಯಲ್ಲಿರಲಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಭರ್ಜರಿ ಉಡುಗೊರೆ: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್‍ನ ಹುಟ್ಟುಹಬ್ಬದ ಅಂಗವಾಗಿ ಅವರು ನಟಿಸಿರುವ ಇನ್ಸ್‍ಪೆಕ್ಟರ್ ವಿಕ್ರಂ ಹಾಗೂ ಜಂಟಲ್‍ಮನ್ ಚಿತ್ರಗಳ ಟೀಸರ್‍ಗಳು ಬಿಡುಗಡೆ ಆಗಿದ್ದರೆ, ರಾಮು ನಿರ್ಮಾಣದ ಅರ್ಜುನ್‍ಗೌಡ ಚಿತ್ರದ ಪ್ರೋಮೋ ಯುಟ್ಯೂಬ್‍ಗೆ ಆಪ್‍ಲೋಡ್ ಆಗಲಿದೆ.

ಇದೇ ಸಂದರ್ಭದಲ್ಲಿ ನಟ ದೇವರಾಜ್ ಮಗನಿಗೆ ಸುಮಾರು 90 ಲಕ್ಷ ರೂ. ಬೆಲೆ ಬಾಳುವ ಕೆಂಪು ಬಣ್ಣದ ವೋಲ್ವೋ ಎಕ್ಸ್‍ಸಿ-90 ಕಾರನ್ನು ಜನ್ಮದಿನದ ಉಡುಗೊರೆಯಾಗಿ ನೀಡಿದ್ದಾರೆ.

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin