ಬಿಜೆಪಿ ಸಂಸದರಿಗೆ ಪ್ರಮೋದ್ ಮುತಾಲಿಕ್ ವಾರ್ನಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರ್ಗಿ, ಜು.4- ನಿಮ್ಮ ಮುಖ ನೋಡಿ ಮತ ಹಾಕಿಲ್ಲ. ಮೋದಿ ಹಿಂದುತ್ವದ ಹಿನ್ನೆಲೆಯಲ್ಲಿ ವೋಟಾಕಿದ್ದೇವೆ. ಐದು ವರ್ಷ ಸುಮ್ಮನೆ ಕೆಲಸ ಮಾಡಿರಿ ಎಂದು ಬಿಜೆಪಿ ಸಂಸದರಿಗೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಾಕೀತು ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆ ಅಬ್ಜಲ್‍ಪುರ ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಹಿಂದುತ್ವ ನೋಡಿ ವೋಟಾಕಿದ್ದೇವೆ. ಮುಂದಿನ ಬಾರಿ ಇದೇ ರೀತಿ ಹಿಂದುತ್ವದ ಬಗ್ಗೆ ಹೇಳಿಕೊಂಡು ಮತ ಕೇಳಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂಬ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಆಯ್ಕೆಯಾಗಿರುವವರ ಸಾಧನೆ ಏನೆಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಜನ ಮೋದಿ ನೋಡಿ ಮತ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ